ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ ಹೇಳಿದರು.
ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಈ ಸಮಾಜದ ಬೆನ್ನೆಲುಬು ಒಂದು ಕಾಲದಲ್ಲಿ ಮನೆಯ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದ ಹೆಣ್ಣು ಇಂದು ಆಕಾಶವನ್ನೇ ಮುಟ್ಟಿದ್ದಾಳೆ, ಮಹಿಳೆಯರು ಸ್ವಾವಲಂಬಿಗಳಾಗಿ ಬದುಕನ್ನು ಕಟ್ಟಿಕೊಳ್ಳಬೇಕು, ಬಣ್ಣದ ಜಗತ್ತಿಗೆ ಬೆರಗಾಗಬಾರದು ಎಂದರು.
ಲೀಜಿಯನ್ ಎನರ್ಜಿ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿಯದ ಮಮತಾಶ್ರೀ ಡಿ.ವಿ ರವರು ಮಾತನಾಡಿ ಮಹಿಳೆಯರ ಯಶಸ್ವಿಗೆ ಸರಿಯಾದ ಮಾರ್ಗ ತೋರಿಸಿದರೆ ಅವರು ಅತ್ಯಾದ್ಭುತವಾಗಿ ಸಾಧನೆ ಮಾಡುವುದಲ್ಲದೆ ತಮ್ಮ ಜೊತೆ ಇರುವವರನ್ನು ಬೆಳೆಸುತ್ತಾರೆ ಅದುವೇ ಶ್ರೀಶಕ್ತಿಯ ಗುಣ, ಅಮ್ಮನಿಂದ ಹಿಡಿದು ಮಡದಿಯವರಿಗೆ, ಸೋದರಿಯಿಂದ ಪುತ್ರಿಯವರಿಗೆ ಮಹಿಳೆ ಎಂಬ ಬಲವೇ ಪುರುಷನಿಗೆ ಶಕ್ತಿ ತುಂಬುವ ಮಹಾಚೈತನ್ಯ ಎಂದರು.
ಶ್ರೀ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಜಿ ರಾಜೇಂದ್ರ ಮಾತನಾಡಿ, ಮಹಿಳೆಯರು ಶಿಕ್ಷಣ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದಾರೆ,ಹೆಣ್ಣು ಕೇವಲ ವೃತ್ತಿಜೀವನವಷ್ಟೇ ಅಲ್ಲದೆ, ಕುಟುಂಬದ ಪ್ರೀತಿ, ಸಂಸ್ಕಾರ ಮತ್ತು ನಿರ್ವಹಣೆಯಲ್ಲಿ ಮಹಿಳೆಯ ಪಾತ್ರ ಅಪ್ರತಿಮ. ಅವಳು ತಾಯಿಯಾಗಿ, ಮಗಳಾಗಿ, ಪತ್ನಿಯಾಗಿ ಮತ್ತು ಸಹೋದರಿಯಾಗಿ ನೀಡುವ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದರು.
ಪ್ರಾಂಶುಪಾಲರಾದ ಡಾ. ಗೌರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ, ಉಪ ಪ್ರಾಂಶುಪಾಲರಾದ ಕೆ ದಕ್ಷಿಣ ಮೂರ್ತಿ, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ, ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ.ಪಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ನಂದನ, ಪ್ರಾಧ್ಯಾಪಕರಾದ ದಿವ್ಯ ಎನ್. ಪದ್ಮ ಬಿಂದು, ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…