ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಹೋಬಳಿ ವ್ಯಾಪ್ತಿಗೆ ಬರುವ ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮವನ್ನು ಕುರಿತು ಸಂಸ್ಥೆಯ ನಿರ್ದೇಶಕರಾದ ಅಂಬರೀಶ ಬಿ.ಸಿ. ಮಾತನಾಡಿ, ಮೊದಲಿಗೆ ಎಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದ ಅವರು, ಮಹಿಳೆಯರು ಉತ್ತಮ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಮಹಿಳೆಯರು ಹೆಚ್ಚು-ಹೆಚ್ಚು ಸ್ವ-ಉದ್ಯೋಗದಲ್ಲಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕತೆ ಅಭಿವೃದ್ಧಿ ಹೊಂದುವುದರ ಜೊತೆಗೆ ತಮ್ಮ-ತಮ್ಮ ಕುಟುಂಬಗಳ ಆರ್ಥಿಕತೆಯನ್ನು ಆಭಿವೃದ್ಧಿಪಡಿಸಲು ಸಾಧ್ಯ ಹಾಗೂ ಸಮಾಜದಲ್ಲಿ ತಮ್ಮ ಸ್ಥಾನಮಾನ ಗುರುತಿಸಿಕೊಳ್ಳುವುದಕ್ಕೆ ನಮ್ಮ ಸಂಸ್ಥೆಯು ಹೆಚ್ಚಿನ ಸಹಾಯಕಾರಿಯಾಗಿರುತ್ತದೆ ಎಂದು ಕಿವಿಮಾತು ಹೇಳಿದರು.
ಸಂಸ್ಥೆಯಲ್ಲಿ ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿ ಸ್ವಾವಲಂಬಿ ಜೀವನ ಕಟ್ಟಿಕೊಂಡಿರುವ ಮಹಿಳೆಯರು ಹೆಚ್ಚು ಸಮಾಜದಲ್ಲಿ ಗುರುತಿಸಿಕೊಂಡಿರುವುದು ನಮ್ಮ ಸಂಸ್ಥೆಯ ಹೆಮ್ಮೆಯ ಕೊಡುಗೆಯಾಗಿದೆ ಎಂದು ತಿಳಿಸಿದರು.
ಸಂಸ್ಥೆಯಲ್ಲಿ ಅಣಬೆ ಬೇಸಾಯ ಮತ್ತು ಬ್ಯೂಟಿ ಪಾರ್ಲರ್ ತರಬೇತಿ ಪಡೆದು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಸ್ವ ಉದ್ಯೋಗಿಗಳಾದ, ಕಾವ್ಯ ಮತ್ತು ಶೋಭ ರವರು ಭಾಗವಹಿಸಿ ಮಾತನಾಡಿದ ಅವರು, ಮಹಿಳೆರಿಗೆ ಸಮಾಜದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೇ, ಅವುಗಳನ್ನು ಮೆಟ್ಟಿ ಮುನ್ನುಗಿ ನಡೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಭಕ್ತಿ, ನಂಬಿಕೆ ಮತ್ತು ಚಲ ಎಂಬ ಈ ನಾಲ್ಕು ಸಾಧನಗಳಿಂದ ನಮಗೆ ಯಶಸ್ವಿ ಎಂಬ ಸಾಧನೆ ದೊರೆಯುತ್ತದೆ ಎಂದು ತಮ್ಮ ಸಾಧನೆ ಹಾದಿಯ ಅನುಭವವನ್ನು ಹಂಚಿಕೊಂಡರು.
ಇದೇ ಸಂಧರ್ಭದಲ್ಲಿ ಯಶಸ್ವಿ ಸ್ವ ಉದ್ಯೋಗಿಗಳನ್ನು ಸನ್ಮಾನಿಸಲಾಯಿತು.
ಇದೇ ಸಂಧರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ಮುನಿಕೃಷ್ಣ.ಎಂ, ರಾಮಕೃಷ್ಣಪ್ಪ, ಸಂಸ್ಥೆಯ ಸಿಬ್ಬಂದಿ ಸುಗುಣ.ಬಿ, ಕವನ, ನಾಗೇಶ್, ಮುನಿಪಟಾಲಪ್ಪ ಹಾಜರಿದ್ದರು.
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…