ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ ಮಹಿಳೆಯರಂತೆ ವೇಷ ಧರಿಸಿ ಈ ಕೃತ್ಯ ಎಸಗುತ್ತಿದ್ದ. ಸಿಸಿಟಿವಿ ದೃಶ್ಯಾವಳಿಗಳ ಆಧಾರ ಮೇಲೆ ಈ ಸೈಕೋಪಾತ್‌ನನ್ನು ಬಂಧನ‌ ಮಾಡಲಾಗಿದೆ.

ಚಾಮರಾಜನಗರದ ವಿವಿಧ ಬಡಾವಣೆಗಳಲ್ಲಿ ಬಟ್ಟೆ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಮಾತ್ರವೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಅಮೃತ್, ಇದೀಗ ಸೈಕೋಪಾತ್‌ನನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ನಗರದ ಇಂದಿರಾ ನಗರ, ಹೌಸಿಂಗ್ ಬೋರ್ಡ್ ಕಾಲೋನಿ ಹಾಗೂ ಕರಿನಂಜನಪುರ ಬಡಾವಣೆಗಳಲ್ಲಿ ಕಳೆದ ಕೆಲವು ವಾರಗಳಿಂದ ನಿಗೂಢ ಕಳ್ಳತನಗಳು ನಡೆಯುತ್ತಿದ್ದವು. ಜನರು ತಮ್ಮ ಮನೆಯಂಗಳದಲ್ಲಿ ಅಥವಾ ಟೆರೇಸ್ ಮೇಲೆ ಒಗೆದು ಒಣಗಲು ಹಾಕಿದ್ದ ಬಟ್ಟೆಗಳ ಪೈಕಿ ಕೇವಲ ಮಹಿಳೆಯರ ಒಳ ಉಡುಪುಗಳು ಮಾತ್ರ ನಾಪತ್ತೆಯಾಗುತ್ತಿದ್ದವು. ಮೊದಮೊದಲು ಇದು ಗಾಳಿಗೆ ಹಾರಿ ಹೋಗಿರಬಹುದು ಎಂದು ಭಾವಿಸಿದ್ದ ನಿವಾಸಿಗಳಿಗೆ, ಪದೇ ಪದೇ ಇವೇ ಬಟ್ಟೆಗಳು ಕಾಣೆಯಾಗುತ್ತಿರುವುದು ಅನುಮಾನ ಮೂಡಿಸಿತ್ತು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು.

ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಬಡಾವಣೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ದೃಶ್ಯಗಳು ಕಂಡುಬಂದಿದ್ದವು. ಮಧ್ಯರಾತ್ರಿ 1 ರಿಂದ 3 ಗಂಟೆಯ ಸಮಯದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಬಟ್ಟೆಗಳನ್ನು ಧರಿಸಿ, ಮುಖಕ್ಕೆ ಮುಸುಕು ಹಾಕಿಕೊಂಡು ಜನವಸತಿ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆರೋಪಿ ಅಮೃತ್‌ನನ್ನು ಸೆರೆಹಿಡಿದಿದ್ದಾರೆ.

ಆರೋಪಿ ಅಮೃತ್ ಕೇವಲ ಕಳ್ಳತನ ಮಾಡುವುದಷ್ಟೇ ಅಲ್ಲದೆ, ತಾನೂ ಕೂಡ ಮಹಿಳೆಯಂತೆ ಬಟ್ಟೆ ಧರಿಸಿ ನಿರ್ಜನ ಪ್ರದೇಶಗಳಲ್ಲಿ ಮತ್ತು ಬಡಾವಣೆಗಳ ಗಲ್ಲಿಗಳಲ್ಲಿ ಓಡಾಡುತ್ತಿದ್ದ. ಮನೆಯವರು ಮಲಗಿರುವ ಸಮಯವನ್ನು ನೋಡಿ ಕಾಂಪೌಂಡ್ ಹಾರಿ ಒಳಗೆ ನುಗ್ಗಿ, ಒಣಗಲು ಹಾಕಿದ್ದ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ. ಈತನ ಈ ವಿಚಿತ್ರ ನಡವಳಿಕೆಯಿಂದಾಗಿ ಪೊಲೀಸರು ಈತನನ್ನು ಸೈಕೋಪಾತ್ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈತ ಕದ್ದ ಬಟ್ಟೆಗಳನ್ನು ಏನು ಮಾಡುತ್ತಿದ್ದ? ಅಥವಾ ಯಾವುದಾದರೂ ಮಾನಸಿಕ ವಿಕೃತಿ ಹೊಂದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಂಧಿತ ಅಮೃತ್‌ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಈತ ತನ್ನ ಕೃತ್ಯಗಳನ್ನು ಒಪ್ಪಿಕೊಂಡಿದ್ದಾನೆ. ಆದರೆ, ಆತನ ವರ್ತನೆಯಲ್ಲಿ ಅಸಹಜತೆ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆ ಮತ್ತು ಮಾನಸಿಕ ತಜ್ಞರ ತಪಾಸಣೆಗೆ ಒಳಪಡಿಸಿದ್ದಾರೆ. ಕಳ್ಳತನದ ಉದ್ದೇಶ ಕೇವಲ ಹಣ ಗಳಿಸುವುದಾಗಿರದೆ, ಯಾವುದೋ ಮಾನಸಿಕ ವಿಕೃತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಈ ಸೈಕೋಪಾತ್ ಕಳ್ಳನ ಬಂಧನದಿಂದಾಗಿ ಇಂದಿರಾ ನಗರ ಮತ್ತು ಹೌಸಿಂಗ್ ಬೋರ್ಡ್ ಬಡಾವಣೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾತ್ರಿ ವೇಳೆ ಯಾರೋ ಮಹಿಳೆಯಂತೆ ಓಡಾಡುವುದನ್ನು ನೋಡಿ ದೆವ್ವದ ಕಾಟವಿರಬಹುದು ಎಂದು ಕೆಲವರು ಭಯಗೊಂಡಿದ್ದರು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

2 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

7 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

9 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

20 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago