Categories: ಕೋಲಾರ

ಮಹಿಳೆಯರ ಘನತೆಯುಕ್ತ ಬದುಕು ಹಕ್ಕಾಗಬೇಕು- ಜೆಎಂಎಸ್ ಗೌರಮ್ಮ

ಕೋಲಾರ: ಮಹಿಳೆಯರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕಾದರೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಘನತೆಯುಕ್ತ ಬದುಕು ಹಕ್ಕಾಗಬೇಕು ಜೊತೆಗೆ ಅನ್ಯಾಯದ ವಿರುದ್ದ ಪ್ರಶ್ನೆ ಮಾಡುವ ಮನಸ್ಥಿತಿ ಎಲ್ಲಾ ಮಹಿಳೆಯರಲ್ಲಿ ಬರಬೇಕಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಗೌರಮ್ಮ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಿಐಟಿಯು ನೇತೃತ್ವದ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ವತಿಯಿಂದ 117 ನೆಯ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಭ್ರೂಣ ಹತ್ಯೆಗಳು ಮಾರ್ಯಾದೆ ಹತ್ಯೆಗಳಿಗೆ ಕಡಿವಾಣ ಶಿಕ್ಷಣವಾಗಬೇಕು ಪುರುಷರು ಅಷ್ಟೇ ಕೇವಲ ಸಭೆ ಸಮಾರಂಭಗಳಲ್ಲಿ ಮಹಿಳೆಯರಿಗೆ ಗೌರವಿಸಿದರೆ ಸಾಲದು ಮಹಿಳೆಯರ ಬದುಕಿಗೆ ದಾರಿಯಾಗಿರಲು ಆರ್ಥಿಕವಾಗಿ ಬೆಂಬಲಿಸಬೇಕು ದುಡಿಯುವ ಮಹಿಳೆಯರಿಗೆ 8 ಗಂಟೆ ದುಡಿಮೆ ಬದಲಿಗೆ 12 ಗಂಟೆ ಮಾಡುವುದನ್ನು ಎಲ್ಲಾ ಮಹಿಳೆಯರು ವಿರೋಧಿಸಬೇಕು ಎಂದು ತಿಳಿಸಿದರು.

ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಶೋಷಣೆ ನಡೆಯುತ್ತಲೇ ಇದೆ ಅಂಕಿಅಂಶಗಳ ಪ್ರಕಾರ ದೂರು ದಾಖಲಾದರು ಶಿಕ್ಷೆ ಮಾತ್ರ ಕಡಿಮೆಯಾಗಿದ್ದರಿಂದಲೇ ಹೆಚ್ಚು ಘಟನೆಗಳು ನಡೆಯುತ್ತಿವೆ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ಮಹಿಳೆಯರು ಧೈರ್ಯ, ಸಾಹಸ ಜನ ಮೆಚ್ಚುವಂತ ಕಾರ್ಯ ಸರ್ಕಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರತಿಯೊಂದು ರಂಗದಲ್ಲಿ ಅದರಲ್ಲೂ ರಾಜಕೀಯ ರಂಗದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಬೇಕು. ಮಹಿಳಾ ಮೀಸಲಾತಿಗೆ ನಿರಂತರ ಶ್ರಮ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಸಮಾನತೆಯ ಸಮಾಜ ನಿರ್ಮಾಣವಾಗಬೇಕಾದರೆ ಪುರುಷನಷ್ಟೇ ಮಹಿಳೆಯರಿಗೂ ಸಮಾನ ಅವಕಾಶ ಸಿಗಬೇಕಿದೆ. ಇಂತಹ ಅವಕಾಶ ದೊರೆತರೆ ಮಹಿಳೆಯರು ತಮ್ಮ ಪ್ರತಿಭೆ, ಸಾಮರ್ಥ್ಯ‌ ವ್ಯಕ್ತಪಡಿಸುತ್ತಾರೆ. ಸಮಾನತೆ ನಿರಂತರ ಹೋರಾಟದ ಅಗತ್ಯತೆ ಇದೆ. ನಮ್ಮ ಕುಟುಂಬದಿಂದಲೇ ಸಮಾನತೆ ಆರಂಭವಾದಾಗ ಮಾತ್ರ ಸಮಾಜದಲ್ಲಿ ಸಮಾನತೆ, ಬದಲಾವಣೆ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕಿ ಆರ್ ಅಂಜಲಮ್ಮ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು ಮಹಿಳೆಯರು ವಿದ್ಯಾವಂತರಾಗಿ ಮುಂದೆ ಬರಬೇಕು. ಶೋಷಣೆ, ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ವರದಕ್ಷಿಣೆ, ಬಾಲ್ಯ ವಿವಾಹ, ಲೈಂಗಿಕ ಕಿರುಕುಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಹರಣಿ, ಕೆ.ಪಿ.ಆರ್.ಎಸ್ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ, ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಂಘಟನಾ ಸಂಚಾಲಕಿ ಎಂ.ಜಯಲಕ್ಷ್ಮಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಗಾಂಧಿನಗರ ಮಂಜುಳಾ ಜಿಲ್ಲಾ ಖಜಾಂಚಿ ಸುಜಾತ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಂಜಮ್ಮ ಮುಂತಾದವರು ಇದ್ದರು.

Ramesh Babu

Journalist

Share
Published by
Ramesh Babu

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

2 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

17 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago