ಕೋಲಾರ: ಮಹಿಳೆಯರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕಾದರೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಘನತೆಯುಕ್ತ ಬದುಕು ಹಕ್ಕಾಗಬೇಕು ಜೊತೆಗೆ ಅನ್ಯಾಯದ ವಿರುದ್ದ ಪ್ರಶ್ನೆ ಮಾಡುವ ಮನಸ್ಥಿತಿ ಎಲ್ಲಾ ಮಹಿಳೆಯರಲ್ಲಿ ಬರಬೇಕಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಗೌರಮ್ಮ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಿಐಟಿಯು ನೇತೃತ್ವದ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ವತಿಯಿಂದ 117 ನೆಯ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಭ್ರೂಣ ಹತ್ಯೆಗಳು ಮಾರ್ಯಾದೆ ಹತ್ಯೆಗಳಿಗೆ ಕಡಿವಾಣ ಶಿಕ್ಷಣವಾಗಬೇಕು ಪುರುಷರು ಅಷ್ಟೇ ಕೇವಲ ಸಭೆ ಸಮಾರಂಭಗಳಲ್ಲಿ ಮಹಿಳೆಯರಿಗೆ ಗೌರವಿಸಿದರೆ ಸಾಲದು ಮಹಿಳೆಯರ ಬದುಕಿಗೆ ದಾರಿಯಾಗಿರಲು ಆರ್ಥಿಕವಾಗಿ ಬೆಂಬಲಿಸಬೇಕು ದುಡಿಯುವ ಮಹಿಳೆಯರಿಗೆ 8 ಗಂಟೆ ದುಡಿಮೆ ಬದಲಿಗೆ 12 ಗಂಟೆ ಮಾಡುವುದನ್ನು ಎಲ್ಲಾ ಮಹಿಳೆಯರು ವಿರೋಧಿಸಬೇಕು ಎಂದು ತಿಳಿಸಿದರು.
ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಶೋಷಣೆ ನಡೆಯುತ್ತಲೇ ಇದೆ ಅಂಕಿಅಂಶಗಳ ಪ್ರಕಾರ ದೂರು ದಾಖಲಾದರು ಶಿಕ್ಷೆ ಮಾತ್ರ ಕಡಿಮೆಯಾಗಿದ್ದರಿಂದಲೇ ಹೆಚ್ಚು ಘಟನೆಗಳು ನಡೆಯುತ್ತಿವೆ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ಮಹಿಳೆಯರು ಧೈರ್ಯ, ಸಾಹಸ ಜನ ಮೆಚ್ಚುವಂತ ಕಾರ್ಯ ಸರ್ಕಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರತಿಯೊಂದು ರಂಗದಲ್ಲಿ ಅದರಲ್ಲೂ ರಾಜಕೀಯ ರಂಗದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಬೇಕು. ಮಹಿಳಾ ಮೀಸಲಾತಿಗೆ ನಿರಂತರ ಶ್ರಮ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಸಮಾನತೆಯ ಸಮಾಜ ನಿರ್ಮಾಣವಾಗಬೇಕಾದರೆ ಪುರುಷನಷ್ಟೇ ಮಹಿಳೆಯರಿಗೂ ಸಮಾನ ಅವಕಾಶ ಸಿಗಬೇಕಿದೆ. ಇಂತಹ ಅವಕಾಶ ದೊರೆತರೆ ಮಹಿಳೆಯರು ತಮ್ಮ ಪ್ರತಿಭೆ, ಸಾಮರ್ಥ್ಯ ವ್ಯಕ್ತಪಡಿಸುತ್ತಾರೆ. ಸಮಾನತೆ ನಿರಂತರ ಹೋರಾಟದ ಅಗತ್ಯತೆ ಇದೆ. ನಮ್ಮ ಕುಟುಂಬದಿಂದಲೇ ಸಮಾನತೆ ಆರಂಭವಾದಾಗ ಮಾತ್ರ ಸಮಾಜದಲ್ಲಿ ಸಮಾನತೆ, ಬದಲಾವಣೆ ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕಿ ಆರ್ ಅಂಜಲಮ್ಮ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು ಮಹಿಳೆಯರು ವಿದ್ಯಾವಂತರಾಗಿ ಮುಂದೆ ಬರಬೇಕು. ಶೋಷಣೆ, ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ವರದಕ್ಷಿಣೆ, ಬಾಲ್ಯ ವಿವಾಹ, ಲೈಂಗಿಕ ಕಿರುಕುಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಹರಣಿ, ಕೆ.ಪಿ.ಆರ್.ಎಸ್ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ, ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಂಘಟನಾ ಸಂಚಾಲಕಿ ಎಂ.ಜಯಲಕ್ಷ್ಮಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಗಾಂಧಿನಗರ ಮಂಜುಳಾ ಜಿಲ್ಲಾ ಖಜಾಂಚಿ ಸುಜಾತ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಂಜಮ್ಮ ಮುಂತಾದವರು ಇದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…