ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿಯೊಂದು ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವುದರಿಂದ ಕುಟುಂಬದ ಜೀವನ ಪರಿಸ್ಥಿತಿ ಸುಧಾರಿಸಲು ಸಹಕಾರಿ, ಮಹಿಳೆಯರನ್ನು ಸಶಕ್ತರನ್ನಾಗಿಸಿ ಸ್ವಾವಲಂಬನೆಯ ಬದುಕು ಸಾಗಿಸಲು, ಅರ್ಥಿಕವಾಗಿ ಸಬಲರಾಗಲು ಈ ಯೋಜನೆ ಉಪಯೋಗವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ದೇವನಹಳ್ಳಿ ಪುರಸಭೆ ಉಪಾಧ್ಯಕ್ಷೆ ಗೀತಾ ಶ್ರೀಧರ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ಅಧಿಕಾರಿಗಳಾದ ಅನಿತಾ ಲಕ್ಷ್ಮಿ, ಜಿಲ್ಲಾ ನಗರಾಭಿವೃದ್ದಿ ಕೋಶ ಯೋಜನಾ ನಿರ್ದೇಶಕಿ ಶಾಲಿನಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಸಿ. ರೂಪಾ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು, ಗೃಹಲಕ್ಷ್ಮಿ ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…