ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್ ಕಾವಳೆ ಅವರು ತಿಳಿಸಿದರು.
ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ ಮಹಿಳಾ ಫಲಾನುಭವಿಗಳಿಗೆ ಹಮ್ಮಿಕೊಳ್ಳಲಾಗಿದ್ದ 30 ದಿನಗಳ ಉಚಿತ ಲಘು ವಾಹನ ಚಾಲನಾ ತರಬೇತಿಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ, ಅವರು ಮಾತನಾಡಿದರು.
ರುಡ್‌ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುವುದು ಮಾತ್ರವಲ್ಲದೇ, ಬ್ಯಾಂಕಿನಲ್ಲಿ ಸಾಲ ಪಡೆದು, ಸ್ವ ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿಗಳಾಗಬೇಕು ಹಾಗೂ ಪ್ರತಿ ಗ್ರಾಮ ಪಂಚಾಯಿತಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದ ವಾಹನ ಚಾಲನೆ ಮಾತ್ರವಲ್ಲದೇ, ಪ್ರವಾಸೋದ್ಯಮ ಚಟುವಟಿಕೆಗಳಿಗೂ ವಾಹನ ಚಾಲನೆಯ ಕೌಶಲ್ಯವನ್ನು ಬಳಸಿಕೊಳ್ಳಬಹುದು ಎಂದರು.
ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸ್ಚಚ್ಛತಾ ವಾಹಿನಿಯ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ, ಸಂಸ್ಥೆಯಲ್ಲಿ ಪಡೆದ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರಲ್ಲದೆ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಲವಾರು ಕೆಲಸಗಳನ್ನು ಒಟ್ಟಿಗೆ ನಿಭಾಯಿಸುವ ಅನನ್ಯ ಶಕ್ತಿ ಕೇವಲ ಮಹಿಳೆಯರಿಗೆ ಮಾತ್ರ ಇರುವುದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಜೆ. ಆನಂದ್ ಅವರು, ಬೆಂಗಳೂರು ನಗರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸಮೀಪವಿರುವುದರಿಂದ ತರಕಾರಿಗಳಂತಹ ದಿನನಿತ್ಯದ ವಸ್ತುಗಳು, ಆಹಾರೋತ್ಪನ್ನಗಳು ಸೇರಿದಂತೆ ಸರಕು ಸಾಗಾಣಿಕೆಗೆ ವಿಫುಲ ಅವಕಾಶಗಳಿವೆ ಹಾಗೂ ಬೆಂಗಳೂರು ಅಂತರರಾಷ್ಟೃೀಯ ವಿಮಾನ ನಿಲ್ದಾಣವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ನೆಲೆಗೊಂಡಿರುವುದರಿಂದ ವಾಹನ ಚಾಲನೆಯಂತಹ ಅವಕಾಶಗಳು ಮಹಿಳೆಯರಿಗೆ ಸಾಕಷ್ಟಿವೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ವಿಠ್ಠಲ್ ಕಾವಳೆ ಅವರು ಸಾಂಕೇತಿಕವಾಗಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಂಜುಳಾ, ಜಿಲ್ಲಾ ವ್ಯವಸ್ಥಾಪಕರಾದ ಅಶೋಕ್, ವಾಹನ ಚಾಲನಾ ತರಬೇತಿಯ ತರಬೇತುದಾರರಾದ ಮಂಜೇಶ್, ರಶ್ಮಿ ಮತ್ತು ಸಹಾಯಕರು, ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಮತ್ತು ವಿದ್ಯಾ ಹೊಸಮನಿ ಸೇರಿದಂತೆ ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಲಘು ವಾಹನ ಚಾಲನಾ ತರಬೇತಿಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…