ಮಹಿಳೆಯರ ಸಶಕ್ತೀಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ ಮಹಿಳಾ ಫಲಾನುಭವಿಗಳಿಗೆ ಹಮ್ಮಿಕೊಳ್ಳಲಾಗಿದ್ದ 30 ದಿನಗಳ ಉಚಿತ ಲಘು ವಾಹನ ಚಾಲನಾ ತರಬೇತಿಯ ಸಮಾರೋಪ‌ ಸಮಾರಂಭವನ್ನು ಉದ್ದೇಶಿಸಿ, ಅವರು ಮಾತನಾಡಿದರು.

ರುಡ್‌ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುವುದು ಮಾತ್ರವಲ್ಲದೇ, ಬ್ಯಾಂಕಿನಲ್ಲಿ ಸಾಲ ಪಡೆದು, ಸ್ವ ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿಗಳಾಗಬೇಕು ಹಾಗೂ ಪ್ರತಿ ಗ್ರಾಮ ಪಂಚಾಯಿತಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದ ವಾಹನ ಚಾಲನೆ ಮಾತ್ರವಲ್ಲದೇ, ಪ್ರವಾಸೋದ್ಯಮ ಚಟುವಟಿಕೆಗಳಿಗೂ ವಾಹನ ಚಾಲನೆಯ ಕೌಶಲ್ಯವನ್ನು ಬಳಸಿಕೊಳ್ಳಬಹುದು ಎಂದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸ್ಚಚ್ಛತಾ ವಾಹಿನಿಯ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ, ಸಂಸ್ಥೆಯಲ್ಲಿ ಪಡೆದ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರಲ್ಲದೆ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಲವಾರು ಕೆಲಸಗಳನ್ನು ಒಟ್ಟಿಗೆ ನಿಭಾಯಿಸುವ ಅನನ್ಯ ಶಕ್ತಿ ಕೇವಲ ಮಹಿಳೆಯರಿಗೆ ಮಾತ್ರ ಇರುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ಜೆ. ಆನಂದ್‌ ಅವರು, ಬೆಂಗಳೂರು ನಗರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸಮೀಪವಿರುವುದರಿಂದ ತರಕಾರಿಗಳಂತಹ ದಿನನಿತ್ಯದ ವಸ್ತುಗಳು, ಆಹಾರೋತ್ಪನ್ನಗಳು ಸೇರಿದಂತೆ ಸರಕು ಸಾಗಾಣಿಕೆಗೆ ವಿಫುಲ ಅವಕಾಶಗಳಿವೆ ಹಾಗೂ ಬೆಂಗಳೂರು ಅಂತರರಾಷ್ಟೃೀಯ ವಿಮಾನ ನಿಲ್ದಾಣವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ನೆಲೆಗೊಂಡಿರುವುದರಿಂದ ವಾಹನ ಚಾಲನೆಯಂತಹ ಅವಕಾಶಗಳು ಮಹಿಳೆಯರಿಗೆ ಸಾಕಷ್ಟಿವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ಸಾಂಕೇತಿಕವಾಗಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಂಜುಳಾ, ಜಿಲ್ಲಾ ವ್ಯವಸ್ಥಾಪಕರಾದ ಅಶೋಕ್‌, ವಾಹನ ಚಾಲನಾ ತರಬೇತಿಯ ತರಬೇತುದಾರರಾದ ಮಂಜೇಶ್‌, ರಶ್ಮಿ ಮತ್ತು ಸಹಾಯಕರು, ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಮತ್ತು ವಿದ್ಯಾ ಹೊಸಮನಿ ಸೇರಿದಂತೆ ರುಡ್‌ಸೆಟ್‌ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಲಘು ವಾಹನ ಚಾಲನಾ ತರಬೇತಿಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

36 minutes ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

3 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

15 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

21 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago