ದೊಡ್ಡಬಳ್ಳಾಪುರ: ಮಹಿಳೆಯ ಗರ್ಭಕೋಶದಲ್ಲಿ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ದೊಡ್ಡಬಳ್ಳಾಪುರ ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ.
ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಎಂಬುವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಹೊಟ್ಟೆನೋವು, ಸುಸ್ತು ಎಂದು ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ 4 ರಿಂದ 5 ಕೆ.ಜಿಯಷ್ಟು ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪ್ರಸೂತಿ ಸ್ತ್ರಿರೋಗ ತಜ್ಞರಾದ ಡಾ.ಅರ್ಚನಾ ಕೆ.ಎಲ್ ನೇತೃತ್ವದ ವೈದ್ಯರ ತಂಡ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದೆ.
ವೈದ್ಯೆ ಡಾ.ಅರ್ಚನಾ ಕೆ.ಎಲ್ ಮಾತನಾಡಿ ಸಾಮಾನ್ಯವಾಗಿ ಮಹಿಳೆಯರ ಗರ್ಭಕೋಶ, ಅಂಡಾಶಯಗಳಲ್ಲಿ ಗಡ್ಡೆಯು 100ಕ್ಕೆ 10 ಮಂದಿಯಲ್ಲಿ ಸಣ್ಣಪುಟ್ಟದಾಗಿ ಕಂಡುಬರುತ್ತದೆ. ಆದರೆ, ಅಚ್ಚರಿ ಎಂಬಂತೆ ಈ ಮಹಿಳೆಯ ಹೊಟ್ಟೆಯಲ್ಲಿ 4 ರಿಂದ 5 ಕೆಜಿ ಗಡ್ಡೆ ಪತ್ತೆಯಾಗಿದೆ. ಮಹಿಳೆ ಒಂದೆರಡು ದಿನ ತಡವಾಗಿ ಬಂದಿದ್ದರೆ ಆಕೆಯ ಜೀವಕ್ಕೆ ಹಾನಿಯಾಗುತ್ತಿತ್ತು. ಸದ್ಯ ಗರ್ಭಕೋಶದಲ್ಲಿ ಬೆಳೆದಿದ್ದ ದೊಡ್ಡ ಗಾತ್ರದ ಗಡ್ಡೆ ಹೊರತೆಗೆದಿದ್ದು, ಮಹಿಳೆ ಆರೋಗ್ಯವಾಗಿದ್ದಾರೆ ಎಂದರು.
ಶಸ್ತ್ರಚಿಕತ್ಸೆಯ ತಂಡದ ಭಾಗವಾಗಿದ್ದ ಡಾ.ಪ್ರೇಮಲತಾ ಮಾತನಾಡಿ ಇದೊಂದು ಗಂಭೀರ ಮತ್ತು ವೈದ್ಯರಿಗೆ ಸವಾಲಾದ ಪ್ರಕರಣವಾಗಿತ್ತು. ಅನಸ್ತೇಶಿಯಾ ನೀಡುವ ಮುನ್ನಾ ರಕ್ತದೊತ್ತಡ, ಉಸಿರಾಟದ ಸಮಸ್ಯೆ ನಿಯಂತ್ರಣಕ್ಕೆ ಪಡೆದು ಬಳಿಕ ಆಪರೇಷನ್ ಆರಂಭಿಸಿದೆವು. ರಕ್ತದ ಅಗತ್ಯತೆ ಹೆಚ್ಚು ಇದ್ದಿದ್ದರಿಂದ ಮುಂಚಿತವಾಗಿಯೇ 4 ಬಾಟಲ್ ಗಳಷ್ಟು ರಕ್ತವನ್ನು ತರೆಸಿಕೊಂಡಿದ್ದೆವು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಯಿತು ಎಂದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…