ಮಹಿಳೆ ಜೊತೆ ಯುವಕನ ಅಕ್ರಮ ಸಂಬಂಧ ಬಗ್ಗೆ ಸಂಶಯ; ಯುವಕನ ಮೇಲೆ ಹಲ್ಲೆ

ಮಹಿಳೆಯ ಜೊತೆ ಯುವಕನ ಅಕ್ರಮ ಸಂಬಂಧದ ಬಗ್ಗೆ ಸಂಶಯಪಟ್ಟ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಪೊಲೀಸರ ರಕ್ಷಣೆಯಿಂದ ಯುವಕ ಸಾವಿನ ದವಡೆಯಿಂದ ತಪ್ಪಿಸಿಕೊಂಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌಚೇನಹಳ್ಳಿಯ 20 ವರ್ಷದ ಯುವಕ ಆಕಾಶ್ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದಾನೆ. ಕಳೆದ ಸೋಮವಾರ ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್​ಗೆ ಬಂದ ಆಕಾಶ್​ನನ್ನು 30 ಜನರ ಗುಂಪು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದೆ. ರಾಡು, ದೊಣ್ಣೆ, ಕಲ್ಲು ಮತ್ತು ಮುಳ್ಳಿನ ತಂತಿಯಿಂದ ಮನಸೋಯಿಚ್ಛೆ ಹಲ್ಲೆ ಮಾಡಿದ್ದಾರೆ. ಹೊಲದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಲ್ಲದೆ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಸಕಾಲಕ್ಕೆ ಸ್ಥಳಕ್ಕೆ ಬಂದ ಪೊಲೀಸರು ಆಕಾಶ್​ನನ್ನು ರಕ್ಷಣೆ ಮಾಡಿದ್ದಾರೆ.

ಹಲ್ಲೆಗೊಳಗಾದ ಯುವಕ ಆಕಾಶ್ ಮತ್ತು ಮೆಳೆಕೋಟೆ ಕ್ರಾಸ್​ನ ನಿವಾಸಿ ಮಾರುತಿ ಡೈವರ್ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಸ್ನೇಹಿತರಾಗಿದ್ದರು. ಗಂಡನ ಯೋಗಕ್ಷೇಮ ವಿಚಾರಿಸಲೆಂದ್ದು ಮಾರುತಿ ಪತ್ನಿ ಆಕಾಶ್​ಗೆ ಆಗಾಗ ಫೋನ್ ಕರೆ ಮಾಡುತ್ತಿದ್ದಾರಂತೆ.

ಫೋನ್ ಸಂಭಾಷಣೆಯನ್ನೇ ಸಂಶಯಪಟ್ಟ ಮಾರುತಿ ಮತ್ತು ಆತನ ಸ್ನೇಹಿತರು ಆಕೆ ಜೊತೆ ಮಾತಾಡದಂತೆ ಆರು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. ಕಳೆದ ಸೋಮವಾರ ಮಧ್ಯಾಹ್ನ ಮೊಬೈಲ್ ರಿಪೇರಿಗಾಗಿ ಆಕಾಶ್ ಮೆಳೇಕೋಟೆ ಕ್ರಾಸ್​ಗೆ ಹೋಗಿದ್ದ. ಈ ವೇಳೆ ಮಾರುತಿ, ಶ್ರೀನಿವಾಸ್, ಮಂಜುನಾಥ್, ರಘು ಮತ್ತು ನಾಗೇಶ್ ಸೇರಿದಂತೆ 30 ಜನರ ಗುಂಪು ಆಕಾಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಆಕಾಶ್ ಒಬ್ಬ ದಲಿತ ಯುವಕನಾಗಿದ್ದು ಜಾತಿ ನಿಂದನೆ ಸಹ ಮಾಡಿದ್ದಾರೆಂದು ಯುವಕನ ಕಡೆಯವರು ಆರೋಪ ಮಾಡಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

2 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

6 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

9 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

11 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago