ಮಹಿಳೆ ಮಾಂಗಲ್ಯ ಸರ ಕಳವು

ದೊಡ್ಡಬಳ್ಳಾಪುರ: ಮನೆ ಮುಂದೆ ಕುಳಿತಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಳ್ಳರು ಕಸಿದು ಪರಾರಿಯಾದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಿವೇಕಾನಂದ ನಗರದಲ್ಲಿ ನಡೆದಿದೆ.

ರತ್ನಮ್ಮ ಎಂಬ ಮಹಿಳೆ ಮಾಂಗಲ್ಯ ಸರ ಕಳೆದುಕೊಂಡವರು. ಮೇ 27ರ ರಾತ್ರಿ ಸುಮಾರು 8:30ರ ವೇಳೆಗೆ ಮನೆ ಮಾಲೀಕರೊಂದಿಗೆ ಮಾತನಾಡುತ್ತಾ ಮನೆ ಬಳಿ ಕುಳಿತಿದ್ದ ವೇಳೆ ಬೈಕಿನಲ್ಲಿ ಇಬ್ಬರು ಖದೀಮರು ಏಕಾಏಕಿ ಬಂದು ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಕಳುವಾದ ಮಾಂಗಲ್ಯ ಸರವು ಸುಮಾರು 25 ಗ್ರಾಂ ತೂಕವಿದ್ದು, ಅದರ ಮೌಲ್ಯ ಸುಮಾರು ₹1.30 ಲಕ್ಷ ಎಂದು ಅಂದಾಜಿಸಲಾಗಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

10 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

13 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

15 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

18 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

19 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago