ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯ ದೊಡ್ಡಬಳ್ಳಾಪುರ ತಾಲೂಕಿನ ದಡಘಟ್ಟುಮಡಗು ಗ್ರಾಮದಲ್ಲಿ ನಡೆದಿದೆ. ನವೆಂಬರ್ 20ರಂದು ಮಧ್ಯಾಹ್ನದ ಸಮಯದಲ್ಲಿ ಮಹಿಳೆ ಹೊಲದಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಇದೇ ಗ್ರಾಮದ ನರಸೇಗೌಡ ಎಂಬಾತ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ತೀವ್ರ ವಿರೋಧ ವ್ಯಕ್ತಪಡಿಸಿದಾಗ ಮಹಿಳೆಯನ್ನು ನೆಲಕ್ಕೆ ಬೀಳಿಸಿ ಕಲ್ಲು, ದೊಣ್ಣೆಗಳಿಂದ ಮನುಷ್ಯತ್ವ ಮರೆತು ಹಿಗ್ಗಾಮುಗ್ಗಾವಾಗಿ ಹಲ್ಲೆ ಮಾಡಿದ್ದಾನೆ.
ಮಹಿಳೆ ಚೀರಾಟ ಕೂಗಾಟ ಕೇಳಿ ಸ್ಥಳಕ್ಕೆ ಬಂದ ಆರೋಪಿ ನರಸೇಗೌಡನ ಪತ್ನಿ ಮುತ್ತಮ್ಮ ಕೂಡ ವಿಚಾರವನ್ನು ಅರಿಯದೆ ಮಹಿಳೆ ಮೇಲೆಯೇ ಆಕೆಯೂ ಥಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಬಳಿಕ ಅಪರಿಚಿತ ಬೈಕ್ ಸವಾರರ ಸಹಾಯದೊಂದಿಗೆ ಸಾಸಲು ಗ್ರಾಮಕ್ಕೆ ಆಗಮಿಸಿ ಬಳಿಕ ಆಟೋದಲ್ಲಿ ಪೊಲೀಸ್ ಠಾಣೆಗೆ ಬಂದು ನನಗಾದ ಅನ್ಯಾಯದ ಬಗ್ಗೆ ದೂರು ನೀಡಿದ್ದೇನೆ. ಪೊಲೀಸರು ನಾಲ್ಕು ದಿನಗಳ ಬಳಿಕ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆದರೆ ನನ್ನ ಮೇಲೆ ಅತ್ಯಾಚಾರ ಯತ್ನ, ಕೊಲೆ ಯತ್ನ ಮಾಡಿ ಜೀವಬೆದರಿಕೆ ಹಾಕಿರುವ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಪೊಲೀಸರು ತೆಗೆದುಕೊಂಡಿಲ್ಲ. ಈಗ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ. ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೀವಭಯದಲ್ಲಿ ಸಂತ್ರಸ್ತ ಮಹಿಳೆ:
ಆರೋಪಿ ನರಸೇಗೌಡನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲು ನಾಲ್ಕು ದಿನ ಸಮಯ ತೆಗೆದುಕೊಂಡಿದ್ದಾರೆ. ಘಟನೆ ನಡೆದ ವೇಳೆಯೂ ನರಸೇಗೌಡ ಜೀವಬೆದರಿಕೆ ಹಾಕಿ ಓಡಿಹೋಗಿದ್ದಾನೆ. ಗ್ರಾಮದಲ್ಲಿ ನಮ್ಮ ಮನೆ ಊರಿನಿಂದ ಒಂದು ಕಿಲೋಮೀಟರ್ ದೂರ ಇದೆ. ಮತ್ತೊಮ್ಮೆ ದಾಳಿ ಮಾಡಿ ಜೀವ ತೆಗೆಯುವುದಕ್ಕೂ ಹಿಂಜರಿಯುವುದಿಲ್ಲ. ಗಂಡ ಮೂರು ವರ್ಷಗಳ ಹಿಂದೆ ಸಾವನ್ನಪ್ಪಿದ್ದಾರೆ, ಚಿಕ್ಕ ಮಗ ಒಂದು ವರ್ಷ ಹಿಂದೆ ಸಾವನ್ನಪ್ಪಿದ್ದಾನೆ. ಈಗ ನನಗೆ ನನ್ನ ಓರ್ವ ದೊಡ್ಡಮಗ ಬಿಟ್ಟರೆ ಯಾರೂ ಇಲ್ಲ ಸೂಕ್ತ ರಕ್ಷಣೆ ಬೇಕೆಂದು ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡಿದ್ದಾರೆ.
ದೂರು ದಾಖಲಿಸಿಕೊಳ್ಳಲು ತಡ:
ಸಂತ್ರಸ್ತ ಮಹಿಳೆ ರಕ್ತ ಮಡುವಿನಲ್ಲಿ ಬಂದು ಠಾಣೆಗೆ ದೂರು ನೀಡಿದರೂ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇನ್ನೂ ಅತ್ಯಾಚಾರಕ್ಕೆ ಯತ್ನ ಮತ್ತು ಕೊಲೆಗೆ ಯತ್ನ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರೂ ಪೊಲೀಸರು ಎಫ್‌ಐಆರ್‌ನಲ್ಲಿ ಸೆಕ್ಷೆನ್ 376 ಮತ್ತು 307 ದಾಖಲಿಸಿಕೊಳ್ಳದೆ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ತಹಸೀಲ್ದಾರ್ ಮೋಹನಕುಮಾರಿ ಸಾಂತ್ವನ:
ಘಟನೆಯ ವಿಚಾರ ತಿಳಿದ ತಹಸೀಲ್ದಾರ್ ಮೋಹನಕುಮಾರಿ ರಾತ್ರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಜೊತೆ ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚಿಸಿ, ಆಕೆಗೆ ಮನೋಸ್ಥೆರ್ಯ ತುಂಬಿದರು. ಯಾವುದೇ ಭಯಬೇಡ, ಧೈರ್ಯವಾಗಿರುವ ಎಂದು ಹೇಳಿ ನ್ಯಾಯದೊರಕಿಸಿಕೊಡುವ ಬಗ್ಗೆ ಸಂತ್ರಸ್ತ ಮಹಿಳೆ ತಿಳಿಸಿದರು.
ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್:
ತಹಸೀಲ್ದಾರ್ ಮೋಹನಕುಮಾರಿ ಸೂಚನೆಯಂತೆ ಸಂತ್ರಸ್ತ ಮಹಿಳೆಯನ್ನು ಮಕ್ಕಳ ಮತ್ತು ಕಲ್ಯಾಣಾಭಿವೃದ್ಧಿ ಇಲಾಖಾ ಸಿಬ್ಬಂದಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ದರು. ಆಕೆಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿ ಎಂದು ತಹಸೀಲ್ದಾರ್ ಸೂಚಿಸಿದರು.
ಮಹಿಳೆಯರನ್ನು ಬೆಚ್ಚಿ ಬೀಳಿಸಿದ ಘಟನೆ:
ಮಹಿಳೆ ಮೇಲೆ ಕ್ರೂರಿಯಂತೆ ಹಲ್ಲೆ ಮಾಡಿರುವ ಘಟನೆ ನಾಗರಿಕ ಸಮಾಜವನ್ನೇ ತಲೆತಗ್ಗಿಸುವಂತೆ ಮಾಡಿದೆ. ಪೊಲೀಸರು, ಸಂಬಂಧಪಟ್ಟಂತಹ ಅಧಿಕಾರಿಗಳು ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಂಡು ಮತ್ತೊಮ್ಮೆ ಇಂತಹ ಘಟನೆಗಳಿಗೆ ಆಸ್ಪದ ನೀಡದಂತೆ ಕ್ರಮವಹಿಸಬೇಕಿದೆ.
ತಾಲೂಕಿನ ಸಾಸಲು ಹೋಬಳಿ ದಡಘಟ್ಟುಮಡಗು ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಶೀಘ್ರವಾಗಿ ಬಂಧನ ಮಾಡಿ, ಕಾನೂನು ರೀತಿಯಾಗಿ ಕ್ರಮ ತೆಗೆದುಕೊಳ್ಳಲಾಗುವುದು.
– ನಾಗರಾಜು, ಡಿವೈಎಸ್ಪಿ, ದೊಡ್ಡಬಳ್ಳಾಪುರ ಉಪ ವಿಭಾಗ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…