ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್ ತಿಳಿಸಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ನಾರಿಶಕ್ತಿ ವಂದನ್ ಅಧಿನಿಯಮ ಸಾಕಷ್ಟು ವರ್ಷಗಳಿಂದ ಬಾಕಿಯೇ ಇತ್ತು. ಇದು ಜನಸಂಘದ ಕಾಲದಿಂದಲ್ಲೂ ಮಹಿಳೆಯ ಸಬಲೀಕರಣಕ್ಕೆ ಒತ್ತು ನೀಡಲಾಗಿತ್ತು. ಈಗಾಗಲೇ ಅನೇಕ ವರ್ಷಗಳಿಂದ ಮಹಿಳೆ ಮೀಸಲಾತಿ ತರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಹುನ್ನಾರದಿಂದ ಲೋಕಾಸಭೆಯಲ್ಲಿ ಅಂಗೀಕರಿಸಲು ಸಾಧ್ಯವಾಗುತ್ತಿರಲಿಲ್ಲ. ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಕೆಲಸ ಮಾಡಿಕೊಂಡು ಬರುತ್ತಿದೆ. ಮಹಿಳೆಯರಿಗೆ ಸ್ವಚ್ಚ ಭಾರತ್ ಅಭಿಯಾನ, ಬಯಲು ಶೌಚ ನಿರ್ಮೂಲನೆ, ಜನ್ ಧನ್ ಖಾತೆ, ಮುದ್ರಾ ಯೋಜನೆ, ಬೇಟಿ ಬಚಾವೋ, ಬೇಟಿ ಪಡಾವೋ ಸೇರಿದಂತೆ ನಾನಾ ಯೋಜನೆಗಳನ್ನು ಕೇಂದ್ರ ಸರಕಾರ ನಾರಿಯರಿಗೆ ಅನೇಕ ಸೌಲಭ್ಯಗಳನ್ನು ಕೇಂದ್ರ ಸರಕಾರ ನೀಡಿದೆ ಎಂದರು.
ಮಾತೃ ವಂದನಾ , ಮಾತೃ ಪೋಷಣ್ ಯೋಜನೆಗಳ ಮೂಲಕ ಪೌಷ್ಟಿಕ ಆಹಾರವನ್ನು ನೀಡಿದ್ದಾರೆ. ಆರ್ಥಿಕ, ಆರೋಗ್ಯ ಕ್ಷೇತ್ರಗಳಲ್ಲೂ ಮಹಿಳೆಯರನ್ನು ಸಬಲೀಕರಣ ಮಾಡಲು ಕೆಲಸ ಮಾಡಿದರು. ದೇಶದಲ್ಲಿ ಹೆಚ್ಚಿನ ಮತದಾನವನ್ನು ಮಹಿಳೆಯರು ಮಾಡುತ್ತಿದ್ದಾರೆ. ಮಹಿಳೆಯರು ಕೇವಲ ಫಲಾನುಭವಿಗಳಾಗಬಾರದು, ಯೋಜನೆಗಳನ್ನು ರೂಪಿಸುವ ಸ್ಥಾನಕ್ಕೆ ಮಹಿಳೆಯರು ಬರಬೇಕು. ವಿಕಸಿತ ಭಾರತ ಸಂಕಲ್ಪದೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದರು.
ಈ ವೇಳೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ಆನಂದ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಮ್ಮ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನು ರೆಡ್ಡಿ ಸೇರಿದಂತೆ ವಿವಿಧ ತಾಲೂಕುಗಳ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಜರಿದ್ದರು.
ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…