ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.
ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.
ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.
ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…