ಮಾಂಸ ಪ್ರಿಯರೇ ಮೂಳೆ ಕಡಿಯುವಾಗ ಹುಷಾರ್: ವ್ಯಕ್ತಿ ಗಂಟಲಲ್ಲಿ ಚಿಕನ್ ತುಂಡು ಸಿಲುಕಿ ಉಸಿರುಗಟ್ಟಿ ಸಾವು

ಹೈದರಾಬಾದ್‌ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ.  ಚಿಕನ್ ಬಿರಿಯಾನಿ ತಿಂದ ವ್ಯಕ್ತಿಯೊಬ್ಬನ ಗಂಟಲಲ್ಲಿ ಚಿಕನ್ ತುಂಡು ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ರಂಗಾರೆಡ್ಡಿ ಜಿಲ್ಲೆಯ ಶಾದ್‌ನಗರ ಅಣ್ಣಾರಾಮ್ ಗ್ರಾಮದ ಸನುಗೋಮುಲ ಶ್ರೀಕಾಂತ್ (39) ಮೃತ ದುರ್ದೈವಿ.

ಮೊದಲು ಮದ್ಯ ಸೇವಿಸಿ ಸಾವನ್ನಪ್ಪಿದ್ದಾನೆ ಎಂದು ಊಹಿಸಲಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು., ಗಂಟಲಲ್ಲಿ ಮಾಂಸದ ತುಂಡು ಸಿಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದು ಪತ್ತೆಯಾಗಿದೆ.

ಮೃತ ಶ್ರೀಕಾಂತ್ ಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಹೈದರಾಬಾದ್ ನಲ್ಲಿ ನೆಲೆಸಿರುವ ಸಹೋದರಿಯನ್ನು ಭೇಟಿಯಾಗಲು ಹೈದರಾಬಾದ್ ಗೆ ಬಂದಿದ್ದರು. ತಂಗಿ ಆಗಲೇ ಮನೆ ಖಾಲಿ ಮಾಡಿ ಬೇರೆ ಮನೆಗೆ ಹೋಗಿದ್ದರು. ಆಗ ಸಹೋದರಿಗೆ ಫೋನ್ ಮಾಡಿ ಎಲ್ಲಿದ್ದೀರ ಎಂದು ಕೇಳಿದ್ದಾರೆ. ಆದರೆ ಅವರು ಔತಣಕೂಟದಲ್ಲಿದ್ದೇವೆ‌ ಬರೋದು ತಡವಾಗುತ್ತದೆ ಎಂದು ಹೇಳಿದ್ದಾರೆ.

ಈ‌ ಹಿನ್ನೆಲೆ ಮದ್ಯದಂಗಡಿಯಲ್ಲಿ ಮದ್ಯಪಾನ ಮಾಡಿ ಚಿಕನ್ ಬಿರಿಯಾನಿ ತಿಂದಿದ್ದಾನೆ. ಚಿಕನ್ ತಿನ್ನುವಾಗ ಕೋಳಿಯ ತುಂಡು ಗಂಟಲಿಗೆ ಸಿಲುಕಿ ಉಸಿರುಗಟ್ಟಿ ರಸ್ತೆ ಬದಿ ಕುಸಿದು ಬಿದ್ದಿದ್ದಾರೆ.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

51 seconds ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

25 minutes ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

2 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

7 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago