
ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಗ್ರಾಮದ ಹೊರವಲಯದಲ್ಲಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿರುವ ಹಾಲು ಮುತ್ತರಾಯಸ್ವಾಮಿ ದೇವಾಸ್ಥಾನ ಹಾಗೂ ದೇವಸ್ಥಾನದ ಆವರಣದ ಸುತ್ತಾಮುತ್ತ ಸ್ವಚ್ಛತೆ ಕೈಗೊಳ್ಳಲಾಯಿತು.
ಸ್ವಚ್ಛತಾ ಕಾರ್ಯದಲ್ಲಿ ಒಣಕಲ್ಲು ಮಲ್ಲೇಶ್ವರ ಪೀಠದ ಪೀಠಾಧ್ಯಕ್ಷ ಡಾ.ಬಸವರಮಾನಂದ ಸ್ವಾಮೀಜಿ ಪಾಲ್ಗೊಂಡಿದ್ದರು. ಇದೇ ವೇಳೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಂಬಂಧಪಟ್ಟವರ ಜೊತೆ ಚರ್ಚಿಸಿದರು.
ಈ ವೇಳೆ ಸ್ವಯಂ ಸೇವಕರು, ಭಕ್ತಾಧಿಗಳು ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.