ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಆರ್.ಎಲ್.ಜಾಲಪ್ಪ ಅವರ ಪುತ್ರ ಜೆ. ನರಸಿಂಹಸ್ವಾಮಿ(78) ಅವರು ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಜೆ ನರಸಿಂಹಸ್ವಾಮಿ ಯವರು ಇಂದು ಬೆಳಗ್ಗೆ ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರೆಂದು ತಿಳಿದುಬಂದಿದೆ.
ಮೃತರ ಅಂತಿಮ ದರ್ಶನದ ವ್ಯವಸ್ಥೆಗೆ ತೂಬಗೆರೆ ಸ್ವಗ್ರಾಮದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ನರಸಿಂಹಸ್ವಾಮಿ ಅವರು ಮೊದಲು ಕಾಂಗ್ರೆಸ್‌ನಿಂದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅಪರೇಷನ್ ಕಮಲಕ್ಕೆ ಒಳಗಾಗಿ, ಜಾಲಪ್ಪ ಅವರ ವಿರೋಧದ ನಡುವೆಯೂ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ಕೊಳಚೆ ನಿರ್ಮೂಲನೆ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.