ಮಾಜಿ ಕೇಂದ್ರ ಸಚಿವ ದಿವಂಗತ ಆರ್.ಎಲ್.ಜಾಲಪ್ಪ 99ನೇ ಹುಟ್ಟುಹಬ್ಬ ಅಂಗವಾಗಿ ವಿವಿಧ ಕಾರ್ಯಕ್ರಮ

ಆರ್.ಎಲ್.ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.

ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಜಾಲಪ್ಪ ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದರು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ನೀಡಿದೆ. ಮುಖ್ಯವಾಗಿ ಮಹಿಳಾ ಉದ್ಯೋಗಿಗಳಿಗೆ ಆಸರೆಯಾಗಿದೆ. ಶೈಕ್ಷಣಿಕವಾಗಿಯೂ ಸಮಾಜವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ಅನೇಕ ವಿದ್ಯಾ ಸಂಸ್ಥೆಗಳನ್ನು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದರು.

*ಪ್ರತಿಭಾ ಪುರಸ್ಕಾರ:*

ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶ್ರೀದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್.ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್.ಶ್ರೀನಿವಾಸ್, ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಎಒ ರಮೇಶ್‌ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


*ರೋಗಿಗಳಿಗೆ ಹಾಲು-ಹಣ್ಣು ವಿತರಣೆ:*
ಜಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಸ್ಟಿಟ್ಯೂಷನ್ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು. ತೂಬಗೆರೆಯ ಆರ್.ಎಲ್.ಜಾಲಪ್ಪ ವೃದ್ದಾಶ್ರಮದಲ್ಲಿನ ಆಶ್ರಿತರಿಗೆ ಸವಲತ್ತುಗಳ ವಿತರಣೆ ನಡೆಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು.

ಜಾಲಪ್ಪ ಸ್ಮೃತಿವನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿಹಿ ಹಂಚಿಕೆ ನಡೆಯಿತು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

2 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

2 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

3 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

5 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

8 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

11 hours ago