ಆರ್.ಎಲ್.ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.
ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಜಾಲಪ್ಪ ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದರು.
ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಶ್ರೀದೇವರಾಜ ಅರಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್.ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್.ಶ್ರೀನಿವಾಸ್, ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಎಒ ರಮೇಶ್‌ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
*ರೋಗಿಗಳಿಗೆ ಹಾಲು-ಹಣ್ಣು ವಿತರಣೆ:*
ಜಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಸ್ಟಿಟ್ಯೂಷನ್ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು. ತೂಬಗೆರೆಯ ಆರ್.ಎಲ್.ಜಾಲಪ್ಪ ವೃದ್ದಾಶ್ರಮದಲ್ಲಿನ ಆಶ್ರಿತರಿಗೆ ಸವಲತ್ತುಗಳ ವಿತರಣೆ ನಡೆಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು.
ಜಾಲಪ್ಪ ಸ್ಮೃತಿವನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿಹಿ ಹಂಚಿಕೆ ನಡೆಯಿತು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…