ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟುಹಬ್ಬ: ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನಾಡಿನ ಹಿರಿಯ ಚೇತನ, ರೈತ ನಾಯಕ, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ, ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಅವರು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ನಿಸರ್ಗ ನಾರಾಯಣಸ್ವಾಮಿ ಅವರು, “ನಮ್ಮ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಅಪ್ಪಾಜಿ ಅವರ ಆಶಯದಂತೆ ಸರಳವಾಗಿ, ಅರ್ಥಪೂರ್ಣವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಗಿದೆ” ಎಂದರು.

ಅಪ್ಪಾಜಿ ಅವರು ತಿರುಪತಿಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಿಂದ, ಅವರ ಆದೇಶದ ಮೇರೆಗೆ ಈ ಬಾರಿ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು. “ಅವರ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದು ಅವರು ನುಡಿದರು.

“ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುತ್ತಿರುವ ಬೆಂಬಲಕ್ಕೆ ನಾವು ಸದಾ ಕೃತಜ್ಞರಾಗಿರುತ್ತೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸುವ ಅವಕಾಶ ನಮಗೆ ದೊರೆಯಲಿ ಎಂದು ಆಶಿಸುತ್ತೇವೆ” ಎಂದು ನಾರಾಯಣಸ್ವಾಮಿ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಬಿದಲೂರು ವಿ.ಎಸ್.ಎಸ್.ಎನ್ ಅಧ್ಯಕ್ಷರಾದ ಕೆ.ವಿ ಮಂಜುನಾಥ್, ಪುರಸಭಾ ಉಪಾಧ್ಯಕ್ಷರಾದ ಜಿ.ಎ ರವೀಂದ್ರ, ಬಮೂಲ್ ನಿರ್ದೇಶಕರಾದ ಶ್ರೀನಿವಾಸ್, ಜೆಡಿಎಸ್ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಲ್ಯಾಣ ಕುಮಾರ್ ಬಾಬು, ಯುವ ಘಟಕದ ಅಧ್ಯಕ್ಷರಾದ ಟಿ.ರವಿ, ತಾಲ್ಲೂಕು ಸೊಸೈಟಿ ಅಧ್ಯಕ್ಷರಾದ ಮುನಿರಾಜ್, ಮುಖಂಡರಾದ ಜೊನ್ನಹಳ್ಳಿ ಮುನಿರಾಜ್, ಟೌನ್ ಅಧ್ಯಕ್ಷರಾದ ಮುನಿನಂಜಪ್ಪ, ನಾಗೇಶ್, ಸಾಯಿಕುಮಾರ್ ಬಾಬು, ಶ್ರೀನಿವಾಸ್, ನಟರಾಜ್, ಶ್ರೀನಾಥ್, ಮಾರೇಗೌಡ, ಭರತ್, ವಿಜಯ್ ಕುಮಾರ್, ಮಹೇಶ್, ಅನಿಲ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

4 minutes ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

19 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

22 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

22 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago