ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (92) ವಿಧಿವಶ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ(92) ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. ಅವರು ವಯೋಸಹಸ ಕಾಯಿಲೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ ಹೊಂದಿದ್ದಾರೆ.

ಎಸ್​.ಎಂ.ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌.ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು.

ಎಸ್.ಎಂ.ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ, ಯಶಸ್ವಿನಿ ಯೋಜನೆ, ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿಯನ್ನಾಗಿ ಮಾಡಿದ್ದು, ಐಟಿ ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಸೇರಿದಂತೆ ಇನ್ನೂ ಹತ್ತಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಜಕ್ಕಲಮೊಡಗು ಕುಡಿಯುವ ನೀರಿನ ಕಾಮಗಾರಿಗೆ ಶಂಕುಸ್ಥಾಪನೆ, ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ ಮಾಡಿದ್ದು ಎಸ್‌. ಎಂ.ಕೃಷ್ಷ ಅವರು.

ಎಸ್.ಎಂ ಕೃಷ್ಣ ಅವರು ಮೊದಲ ಬಾರಿಗೆ ರಾಜಕೀಯ ಚುನಾವಣಾ ಪ್ರಚಾರ ನಡೆಸಿದ್ದು ಅಮೆರಿಕದಲ್ಲಿ ಓದುವಾಗ ಜಾನ್ ಕೆನಡಿ ಪರವಾಗಿ. ಹೀಗಾಗಿ ಕೆನಡಿ ಅವರು ಅಭಿನಂದನ ಪತ್ರ ಬರೆದಿದ್ದರು ಇವರಿಗೆ.

ಇವರು ಮೊದಲು ಶಾಸಕರಾಗಿದ್ದು ಸ್ವಂತ್ರ ಅಭ್ಯರ್ಥಿಯಾಗಿ ಮದ್ದೂರು ಕ್ಷೇತ್ರದಲ್ಲಿ. 1965 ರಲ್ಲಿ. 1968 ರಲ್ಲಿ ಮಂಡ್ಯ ಎಂಪಿ ಸೋಷಿಯಲಿಸ್ಟ್ ಪಕ್ಷದಿಂದ.
1971 ರಲ್ಲಿ ಮಂಡ್ಯ ಎಂಪಿ ಇಂದಿರಾ ಕಾಂಗ್ರೆಸ್ ಪಕ್ಷದಿಂದ. 1976ರಲ್ಲಿ‌ ದೇವರಾಜ ಅರಸು ಸಂಪುಟದ ಕೈಗಾರಿಕಾ ಸಚಿವರಾಗಿದ್ದರು.

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

3 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

3 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

6 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

9 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

21 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

22 hours ago