ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಆರ್.ಎಲ್.ಜಾಲಪ್ಪ ಅವರ ಪುತ್ರ ಜೆ. ನರಸಿಂಹಸ್ವಾಮಿ ಅವರು ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದು, ನರಸಿಂಹಸ್ವಾಮಿ ಅವರ ನಿಧನಕ್ಕೆ ಶಾಸಕ ಧೀರಜ್ ಮುನಿರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜೆ. ನರಸಿಂಹಸ್ವಾಮಿ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು. ಜನಾನುರಾಗಿಯಾಗಿದ್ದ ನರಸಿಂಹಸ್ವಾಮಿ ಅವರಿಗೆ ದೇವ ಸಾಯುಜ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ ಓಂ ಶಾಂತಿಃ 🙏 ಎಂದು ಸಂತಾಪ ಸೂಚಿಸಿದ್ದಾರೆ.