ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಆರ್.ಎಲ್.ಜಾಲಪ್ಪ ಅವರ ಪುತ್ರ, ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರು ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬೆಂಗಳೂರಿನಿಂದ ಸ್ವಕ್ಷೇತ್ರಕ್ಕೆ ನರಸಿಂಹಸ್ವಾಮಿ ಅವರ ಪಾರ್ಥಿವ ಶರೀರ ಆಗಮಿಸಿದ್ದು, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಪ್ರವಾಸಿ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಗಣ್ಯರು ಅಂತಿಮ ದರ್ಶನ ಪಡೆದ ನಂತರ ಹುಟ್ಟೂರು ತೂಬಗೆರೆಗೆ ಪಾರ್ಥಿವ ಶರೀರ ತಲುಪಿತು.
ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಮೃತರ ಸ್ವಗ್ರಾಮ ತೂಬಗೆರೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.