ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಆರ್.ಎಲ್.ಜಾಲಪ್ಪ ಅವರ ಪುತ್ರ, ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರು ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು.
ಸ್ವಗ್ರಾಮ ತೂಬಗೆರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಗಲಿದ ಮಾಜಿ ಶಾಸಕ ಜೆ. ನರಸಿಂಹಸ್ವಾಮಿನವರಿಗೆ ಅಂತಿಮ ನಮನ ಸಲ್ಲಿಸಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ.
ಈ ವೇಳೆ ಆರ್.ವಿ ಮಹೇಶ್, ರಂಗಪ್ಪ, ರಾಮಕೃಷ್ಣಪ್ಪ, ರವಿ ಸಿದ್ದಪ್ಪ, ಕೃಷ್ಣಮೂರ್ತಿ, ಮುನಿಕೃಷ್ಣಪ್ಪ ಸೇರಿದಂತೆ ವಿವಿಧ ರಾಜಕೀಯ ಮುಖಂಡರು, ಸಾರ್ವಜನಿಕರು ಅಂತಿಮ ದರ್ಶನ ಪಡೆದರು.