ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಎಫ್‌ಐಆ‌ರ್ ದಾಖಲು, ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಕೆ

ವಾಲ್ಮೀಕಿ ಮತ್ತು ನಾಯಕ ಸಮಾಜದ ವಿರುದ್ಧ ಅವಹೇಳನಕಾರಿ ಹಾಗೂ ಅಶ್ಲೀಲ ಪದ ಬಳಕೆ ಮಾಡಿದ ಆರೋಪದಡಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಆನೇಕ ಎಫ್ ಐಆರ್ ಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೂ ಸಹ ಇದುವರೆಗೂ ಅವರನ್ನು ಬಂಧನ ಮಾಡದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆ ಮುಖ್ಯಸ್ಥರಾದ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಅವರನ್ನು ಗುರುವಾರ ಭೇಟಿ ಮಾಡಿ ತಕ್ಷಣಕ್ಕೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ಮನವಿ ಸಲ್ಲಿಸಲಾಯಿತು.

ರಾಜ್ಯಾದ್ಯಂತ ಆನೇಕ ಪೊಲೀಸ್ ಠಾಣೆಗಳಲ್ಲಿ ಜಾತಿನಿಂದನೆ ಎಫ್ ಐ ಆರ್ ಗಳು ದಾಖಲಾಗಿವೆ.ಆದರೆ ಇದುವರೆಗೂ ಅವರನ್ನು ಬಂಧನ ಮಾಡದ ಕ್ರಮವನ್ನು ಪ್ರಶ್ನಿಸಿ ಗುರುವಾರ ಡಿಜಿ ಮತ್ತು ಐಜಿ ಹಾಗೂ DCRE ಎಸ್ಪಿ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಸಮಾಜದ ಪರವಾಗಿ ಒತ್ತಡವೇರಿ ಬಂಧನ ಮಾಡುವಂತೆ ಮನವಿ ಮಾಡಿಕೊಂಡರು.

ಈ ವೇಳೆ ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ರಮೇಶ್, ಉಪಾಧ್ಯಕ್ಷ ಕೊಳತೂರು ಶ್ರೀನಿವಾಸ್ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!