​ಮಾಜಿ ಸಚಿವ ಅಂಜನಮೂರ್ತಿ(78) ವಿಧಿವಶ

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನೆಲಮಂಗಲದ ಮಾಜಿ ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ಅಂಜನಮೂರ್ತಿ ಇಂದು ವಿಧಿವಶರಾದರು.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಕಾಂಗ್ರೆಸ್ ನಿಂದ ಶಾಸಕನಾಗಿ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅಂಜನಮೂರ್ತಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ‌. ಈ ಬಾರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *