ಗ್ಯಾರೆಂಟಿ ಯೋಜನೆಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ಖಂಡಿಸಿ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿಂದು ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಪರವಾಗಿ ಪ್ರಚಾರ ಮಾಡಲು ನಗರಕ್ಕಿಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬರಲಿದ್ದಾರೆ. ಈ ಹಿನ್ನೆಲೆ ನಗರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಅವರು ಬರಬಾರದು, ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಗೋಬ್ಯಾಕ್ ಕುಮಾರಸ್ವಾಮಿ ಎಂದು ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರೇವತಿ ಸೇರಿದಂತೆ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.