ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ.
ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…