ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ: ಜಿಲ್ಲಾ ಬಿಜೆಪಿ ಸಂತಾಪ

ಕೋಲಾರ: ರಾಜ್ಯದ ಮಾಜಿ ಮುಖ್ಯಮಂತ್ರಿ, ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಮಂಗಳವಾರ ಜಿಲ್ಲಾ ಬಿಜೆಪಿ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕವನ್ನು ಸದಾಕಾಲ ನೆನೆಯುತ್ತಾರೆ ಅವರ ರಾಜಕೀಯ ಉದ್ದಕ್ಕೂ ಹಿರಿಯರಿಗೆ, ಕಿರಿಯರಿಗೆ ಮಾರ್ಗದರ್ಶನ ನೀಡಿದ್ದಾರೆ ಅವರ ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ನೋವು ಮೆರೆಸುವ ಶಕ್ತಿ ಕೊಟ್ಟು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ವಾಸುದೇವ್, ಮುಖಂಡರಾದ ಕೋಳಿ ನಾಗರಾಜ್, ಎಸ್.ಬಿ ಮುನಿವೆಂಕಟಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಹಾರೋಹಳ್ಲಿ ವೆಂಕಟೇಶ್, ತಿಮ್ಮರಾಯಪ್ಪ, ಓಹಿಲೇಶ್, ಜನಾರ್ದನ, ಅರುಣ್, ಮಂಜುನಾಥ್ ಸಿಂಗ್, ವೆಂಕಟ್, ಮುಂತಾದವರು ಇದ್ದರು.

Leave a Reply

Your email address will not be published. Required fields are marked *

error: Content is protected !!