ಎಂಟು ವರ್ಷದ(2015) ಹಿಂದೆ ಲೋಕಾಯುಕ್ತದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಕೇಸ್ ದಾಖಲಾಗಿತ್ತು. ಈ ಪ್ರಕರಣ ಹೈಕೋರ್ಟ್ ನಲ್ಲಿ ವಜಾ ಆಗಿದೆ. ಇದರಿಂದ ಬಿಎಸ್ ವೈಗೆ ದೊಡ್ಡ ರಿಲೀಫ್ ಸಿಕ್ಕಿದಂತಾಗಿದೆ.
ಬಿಎಸ್ ವೈ ಸಿಎಂ ಆಗಿದ್ದ ವೇಳೆ ಆಕ್ರಮ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಕುರಿತು ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.
ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಬಗ್ಗೆ ತನಿಖೆಯನ್ನು ಲೋಕಾಯುಕ್ತ ನಡೆಸಿತ್ತು. ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ಹೈಕೋರ್ಟ್ ನಲ್ಲಿ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಿಂದ ವಜಾ ಮಾಡಿ ಆದೇಶ ಹೊರಡಿಸದ್ದಾರೆ. ಎಂಟು ವರ್ಷದ ಹಿಂದಿನ ಪ್ರಕರಣದಿಂದ ಬಿಎಸ್ ವೈಗೆ ಮುಕ್ತಿ ಸಿಕ್ಕಿದಂತಾಗಿದೆ.