ಮಾತೃಭಾಷೆಗೆ ಹೆಚ್ಚು ಒತ್ತು ನೀಡಬೇಕು-ಎನ್.ಗಿರೀಶ್

ಮಾತೃಭಾಷೆಯ ಮೂಲಕ ಕಲಿಕೆಯನ್ನು ಪ್ರಾರಂಭಿಸಬೇಕು ಮಾತೃಭಾಷೆಯಲ್ಲಿ ಸ್ಪಷ್ಟವಾಗಿ ಓದು–ಬರಹ ಕಲಿಯುವ ಮಗುವಿಗೆ ಇನ್ನಷ್ಟು ಭಾಷೆ ಹಾಗೂ ವಿಷಯಗಳ ಕಲಿಕೆ ಸುಗಮವಾಗುತ್ತದೆ ಎಂದು ಉಪನ್ಯಾಸಕರಾದ ಎನ್.ಗಿರೀಶ್ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಬಾಲ್ಯದಿಂದಲೇ ಮೊದಲ ಭಾಷೆಯಾಗಿ ಮಕ್ಕಳಿಗೆ ಮಾತೃಭಾಷೆಯನ್ನು ಕಲಿಸಿದರೆ ಜೀವನದಲ್ಲಿ ತುಂಬಾ ಅನುಕೂಲಗಳಾಗುತ್ತವೆ, ಮಾತೃಭಾಷೆಯಿಂದಲೇ ಮಕ್ಕಳ ತೊದಲ ನುಡಿ, ಜೊತೆಗೆ ನಡೆ, ಅಭ್ಯಾಸಗಳು, ರೀತಿ-ನೀತಿ, ನಂಬಿಕೆಗಳು ಈ ಭಾಷೆಯಲ್ಲಿಯೇ ರೂಪುಗೊಳ್ಳುತ್ತಾ ಹೋಗುತ್ತವೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಹುಭಾಷೆ ಮತ್ತು ಬಹುಸಂಸ್ಕೃತಿಯ ಅಸ್ಮಿತೆಯನ್ನು ಉಳಿಸಲು ವಿಶ್ವ ಮಾತೃಭಾಷಾ ದಿನವನ್ನು ಆಚರಿಸಲಾಗುತ್ತಿದೆ, ಭಾವಜೀವಿಯಾದ ಮನುಷ್ಯ ಸಾಮಾಜಿಕ ಜೀವಿಯೂ ಹೌದು. ಭಾವನೆಗಳನ್ನು ಸಮಾಜದಲ್ಲಿನ ಇನ್ನಿತರರೊಂದಿಗೆ ಹಂಚಿಕೊಳ್ಳಲು ಸಂವಹನ ಮಾಡಲು ಸ್ಪಂದನದ ಅಗತ್ಯ ಇರಲೇಬೇಕು ಇದಕ್ಕೆ ಅಂದದ ಚಂದದ ಸೇತುವೆಯೇ ಕನ್ನಡ ಭಾಷೆ.

ಮನುಷ್ಯ ಎಷ್ಟೇ ಭಾಷೆ ಕಲಿತರೂ ಮೂಲ ಯೋಚನೆಗಳೆಲ್ಲ ರೂಪುಗೊಳ್ಳುವುದು, ಚಂದದ ಭಾವನೆಗಳು ಹುಟ್ಟಿಕೊಳ್ಳುವುದು ಅವು ಮಾತಿನ ಅನುಭೂತಿಗೆ ನಿಲುಕುವುದೆಲ್ಲ ಮಾತೃಭಾಷೆಯಲ್ಲಿಯೇ ಹಾಗಾಗಿ ತಾಯಿ ನುಡಿ ಎನ್ನುವುದು ಹೃದಯದ ಭಾಷೆ.

ಎಲ್ಲಾ ಭಾಷೆಯೂ ಸುಮಧುರವೇ, ಎಲ್ಲಾ ಅಮ್ಮಂದಿರೂ ಮಮತಾಮಯಿಗಳೇ ಆದರೂ ನಮಗೆ ನಮ್ಮಮ್ಮನ ಮಡಿಲೇ ವಿಶೇಷ. ಹಾಗೆಯೇ ಭಾಷೆಗಳು ಎಷ್ಟೇ ಇರಲಿ, ಹೃದಯದ ಭಾಷೆಗೆ ಅದರಲ್ಲೂ ನಮ್ಮ ಕನ್ನಡ ಭಾಷೆಗೆ ಆದ್ಯತೆ ಇರಲಿ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಮಹಿಳಾ ಕುಂದು ಕೊರತೆಗಳ ಸಮಿತಿಯ ಸಂಚಾಲಕರಾದ ಎನ್. ದಿವ್ಯ, ಪ್ರಾಧ್ಯಾಪಕರಾದ, ಬಾಬುಸಾಬಿ, ಯಶೋಧ ಸೇರಿದಂತೆ ಮತ್ತಿತರರು ಹಾಜರಿದ್ದರು

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

7 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

13 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

17 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

19 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago