ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಎನ್ಕೋರ್ಡ್ (NCORD – ರಾಷ್ಟ್ರೀಯ ಮಾದಕವಸ್ತು ಸಮನ್ವಯ ಪೋರ್ಟಲ್) ಸಮಿತಿ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ
(ಡ್ರಗ್ಸ್) ಹಾವಳಿಯನ್ನು ನಿರ್ಮೂಲನೆ ಮಾಡಲು ವಿವಿಧೆಡೆ ಮೆಡಿಕಲ್ ಕಾಲೇಜು, ನರ್ಸಿಂಗ್, ಫಾರ್ಮಸಿ ಮುಂತಾದ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಹೊರರಾಜ್ಯದ ವಿದ್ಯಾರ್ಥಿಗಳು ಉಳಿದುಕೊಳ್ಳುವ ಪಿಜಿ ಹಾಗೂ ಖಾಸಗಿ ಹಾಸ್ಟೆಲ್‌ಗಳ ಮೇಲೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಕೃಷಿ, ತೋಟಗಾರಿಕೆ, ರೇಷ್ಮೆ ಪ್ರದೇಶಗಳಲ್ಲಿ ಆಗಿಂದಾಗ್ಗೆ ಪರಿಶೀಲನೆ ನಡೆಸಿ, ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಬ್ಯಾಗ್ ಪರಿಶೀಲನೆ, ಮಕ್ಕಳ ನಡವಳಿಕೆಯಲ್ಲಿ ಸಹ ನಿಗಾ ವಹಿಸಬೇಕು. ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಎಂ.ವಿ. ಮಾತನಾಡಿ, ಮಾದಕ ವಸ್ತುಗಳ ಜಾಲ ಕೇವಲ ಶಾಲಾ-ಕಾಲೇಜುಗಳಿಗೆ ಸೀಮಿತವಾಗಿಲ್ಲ, ಕೈಗಾರಿಕಾ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಖಾಲಿ ನಿವೇಶನ, ಕೃಷಿ ಭೂಮಿ, ಮನೆಯ ತಾರಸಿಯಲ್ಲಿ ಸಹ ಬೆಳೆಯುತ್ತಾರೆ. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು. ಗಾಂಜಾ ಕುರಿತ ಮಾಹಿತಿ ಕಂಡುಬಂದಲ್ಲಿ ಮಾಹಿತಿಯನ್ನು ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕು ಎಂದರು.

ಎನ್ಡಿಪಿಸ್ ಕಾಯ್ದೆ ಅಡಿ ಆಗಸ್ಟ್ 31 ರಿಂದ ಸೆ.23 ವರೆಗೆ 20 ಕೇಸ್ ದಾಖಲಿಸಲಾಗಿದ್ದು 22 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 15 ಕೆಜಿ 14 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಡಿವೈಎಸ್ಪಿ ಪಾಂಡುರಂಗ, ಅಧಿಕಾರಿಗಳು ಉಪಸ್ಥಿತರಿದ್ದರು

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

9 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

14 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

15 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

21 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

21 hours ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

1 day ago