ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಬಗ್ಗೆ ಶಾಲಾ, ಕಾಲೇಜು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ N-CORD ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯ, ಜೀವನದ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತವೆ. ಸಮಾಜದಲ್ಲಿ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಹಾಗಾಗಿ ಅದನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಾ ಬಂದಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಜನನಿಬಿಡ ಪ್ರದೇಶಗಳಲ್ಲಿ ಪೋಸ್ಟರ್, ಬ್ಯಾನರ್ ಅಳವಡಿಸಿ ಜನರಿಗೆ ಜಾಗೃತಿ ಮೂಡಿಸಿ. ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಅಧಿಕಾರಿಗಳು, ಕಾಲಕಾಲಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಅಂತರ-ರಾಜ್ಯ ಮಾದಕವಸ್ತುಗಳ ಮಾರಾಟ, ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಬೇಕಿದೆ.
ಕೃಷಿ ಅಧಿಕಾರಿಗಳು ಅಕ್ರಮವಾಗಿ ಗಾಂಜಾ ಬೆಳೆಯುವವರ ಬಗ್ಗೆ ನಿಗಾ ವಹಿಸಿ, ಆಗಿಂದಾಗ್ಗೆ ಸ್ಥಳ ಪರಿಶೀಲನೆ ನಡೆಸಿ. ಹಾಸ್ಟೆಲ್, ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ಬಳಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ. ಕಸ್ಟಮ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹೊರ ರಾಜ್ಯ, ರಾಷ್ಟ್ರಗಳಿಂದ ಬರುವ ಸರಕುಗಳ ಮೇಲೆ ಇನ್ನಷ್ಟು ಬಿಗಿ ಕ್ರಮ ವಹಿಸಿ ಪರಿಶೀಲನೆ ನಡೆಸಿ ಎಂದರು.
ಜಿಲ್ಲೆಯಲ್ಲಿ ಮಾದಕವಸ್ತು, ವ್ಯಸನ ಮುಕ್ತ ಪುನರ್ವಸತಿ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಪುನರ್ವಸತಿ ಕೇಂದ್ರಗಳು ಇನ್ನಷ್ಟು ಆರಂಭಿಸಲು ಕ್ರಮ ವಹಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಶ್ ಕುಮಾರ್, ಕಸ್ಟಂಸ್ ಸಂಸ್ಥೆಯ ಜಂಟಿ ನಿರ್ದೇಶಕರಾದ ಸಂದೀಪ್ ಗುಂಜಾಲ್, ರಾಷ್ಟ್ರೀಯ ಕಸ್ಟಂಸ್ ಬ್ಯೋರೊ ಅಧಿಕಾರಿ ಶ್ಯಾಂ ಪ್ರಸಾದ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…