ಮಾದಕ ವಸ್ತುಗಳ ಬಳಕೆಯಿಂದ ದೈಹಿಕ‌‌ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳು-ನಟಿ ಪೂಜಾ ಗಾಂಧಿ

ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ‌‌ ಹಾಗೂ ಮಾನಸಿಕವಾಗಿ ತಮ್ಮ ಆರೋಗ್ಯವನ್ನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತು ಸೇವನೆ, ಮಾರಾಟ ಹಾಗೂ ಸಾಗಾಟ ಕಾನೂನಿನ ಪ್ರಕಾರ ಅಪರಾಧ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಜೊತೆ ನಾವು, ನೀವು ಕೈಜೋಡಿಸಿ ಉತ್ತಮ‌ ಸಮಾಜ‌ ನಿರ್ಮಾಣ ಮಾಡಬೇಕಾಗಿದೆ ಎಂದು ನಟಿ ಪೂಜಾಗಾಂಧಿ ತಿಳಿಸಿದರು.

ಇಂದು ನಗರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್, ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಕೆಟ್ಟ ಚಟ, ಕೆಟ್ಟ ಆಲೋಚನೆಗಳಿಂದ ಹೊರಬಂದು ಆರೋಗ್ಯಯುತವಾಗಿ ಜೀವನ ನಡೆಸಬೇಕು. ಎಲ್ಲಿಯಾದರೂ ಮಾದಕವಸ್ತುಗಳ ಬಳಕೆ ಕಂಡುಬಂದಲ್ಲಿ ಕೂಡಲೇ ಪೊಲೀಸರ ಗಮನಕ್ಕೆ ತೆಗೆದುಕೊಂಡು ಬರಬೇಕು ಎಂದು ಹೇಳಿದರು.

ನಂತರ ನಟ ಗುರುನಂದನ್ ಮಾತನಾಡಿ, ಮಾದಕ ವಸ್ತುಗಳ ಬಳಕೆ ಮಾರಕರೋಗವಾಗಿ ಬೆಳೆಯುತ್ತಿರುವುದು ವಿಷಾದನೀಯವಾಗಿದೆ. ಒತ್ತಡ ಇದ್ದಾಗ ಯೋಗ ಮಾಡುವುದು, ಸಂಗೀತ ಕೇಳುವುದು, ಸಿನಿಮಾ ನೋಡುವುದು, ಕ್ರೀಡೆ, ಪ್ರವಾಸ, ಸೇರಿದಂತೆ ಇತರೆ ಒಳ್ಳೆ ಮನರಂಜನಾ ಚಟುವಟಿಕೆಗಳನ್ನು ಮಾಡಿ, ಆದರೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗಬೇಡಿ ಎಂದು ತಿಳಿಸಿದರು.

ಒಂದು ಬಾರಿ ಮಾದಕ ವ್ಯಸನಿಗಳಾದರೆ ವೈಯಕ್ತಿಕ ಬದುಕು ಹಾಳಾಗುವುದಲ್ಲದೇ ಕುಟುಂಬ, ಸಮಾಜಕ್ಕೂ ಬೇಡದವರಾಗುತ್ತೀರಿ, ಆದ್ದರಿಂದ ಎಲ್ಲರಿಗೂ ಉಜ್ವಲ ಭವಿಷ್ಯ ಇರುತ್ತದೆ ಅದನ್ನ ಸಾಕಾರಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ ಪಿಗಳಾದ, ಪುರುಷೋತ್ತಮ, ನಾಗರಾಜ್, ಡಿವೈಎಸ್ ಪಿ ರವಿ.ಪಿ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

27 minutes ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

12 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

18 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

22 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

23 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago