ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಸುಗಮ ಹಾಗೂ ಸುಸೂತ್ರ ಚುನಾವಣಾ ಕಾರ್ಯ ನಿರ್ವಹಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಆರ್.ಲತಾ ಅವರು ಕರೆ ನೀಡಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮಾದರಿ ನೀತಿ ಸಂಹಿತೆ ಮತ್ತು ಇನ್ನಿತರೆ ಚುನಾವಣಾ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾದ್ಯಂತ ಇರುವ ಪ್ರತಿ ಮತಗಟ್ಟೆಯೂ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದ್ದು ಅಧಿಕಾರಿಗಳು ಭೌತಿಕ ಪರಿಶೀಲನೆ ನಡೆಸಿ ಮತ್ತೊಮ್ಮೆ ಖಚಿತ ಪಡಿಸಿಕೊಳ್ಳಬೇಕು ಎಂದರು.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭ ಗಳಿಗೆ ಕಡ್ಡಾಯ ಅನುಮತಿ ಹಾಗೂ ವೆಚ್ಚ ನಿರ್ವಹಣೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆಯಬೇಕು ಎಂದು ಸೂಚಿಸಿದರು.
ಜಿಲ್ಲೆಯ ನಾಲ್ಕು ತಾಲೂಕು ಕಚೇರಿಯಲ್ಲಿ 24/7 ನಿರ್ವಹಣಾ ಕೇಂದ್ರ ಸ್ಥಾಪಿಸಲಾಗಿದ್ದು, ಇವಿಎಂ ಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಸ್ವೀಪ್ ಚಟುವಟಿಕೆಗಳ ಮೂಲಕ ಆಯೋಜಿಸಬೇಕು, ಪಿಡಬ್ಲ್ಯೂಡಿ ಮತದಾರರನ್ನು ಮತ್ತು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಗುರುತಿಸಿ, 12ಡಿ ನಮೂನೆ ನೀಡುವುದು.
ಸದರಿಯವರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ನಿರ್ದೇಶಿಸಿದರು. 80ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಆದಷ್ಟೂ ಮತಗಟ್ಟೆಗಳಿಗೇ ಬಂದು ಮತ ಚಲಾಯಿಸಲು ಅಧಿಕಾರಿಗಳು ಮನವೊಲಿಸಬೇಕು ಎಂದರು.
ಚುನಾವಣಾ ನಿರ್ವಹಣೆ, ಕಾನೂನು ಸುವ್ಯವಸ್ಥೆ, ಮಾದರಿ ನೀತಿ ಸಂಹಿತೆ, ಚುನಾವಣಾ ಕಾರ್ಯಗಳ ಸುಗಮ ನಿರ್ವಹಣೆಗೆ ಸಂಬಂಧಿಸಿದಂತೆ ಅವರು ಮಾತನಾಡಿದರು.
ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ಪೋಸ್ಟ್ಗಳಿಗೆ ಎಸ್‌ಎಸ್‌ಟಿ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿದ್ದು ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಿದರು.
ಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸೂಕ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಬೇಕೆಂದರು.
ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ, ಸೆಕ್ಟರ್ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕೊಂಡು ಕಾರ್ಯ ನಿರ್ವಹಿಸಲು ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಎಂ ತಿರ್ಲಾಪುರ ಅವರು ಮಾತನಾಡಿ ಸ್ವೀಪ್ ಚಟುವಟಿಕೆ ಗಳು ಮುಖಾಂತರ ಹೆಚ್ಚು ಹೆಚ್ಚು ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಮಟ್ಟದ ತರಬೇತುದಾರರಾದ ಡಾ. ಅಮೀರ್ ಪಾಷಾ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ನಾಲ್ಕು ತಾಲ್ಲೂಕುಗಳ ತಹಶೀಲ್ದಾರ್‌ಗಳು, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಭಾಗವಹಿಸಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…