ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಾದಿಗ ಸಮುದಾಯ ಇನ್ನೂ ಹಿಂದುಳಿದಿದೆ. ಸಮುದಾಯ ಎಲ್ಲಾ ರಂಗದಲ್ಲಿ ಮುಂದೆ ಬರಲು ನಾವೆಲ್ಲರೂ ಶಿಕ್ಷಣ ಪಡೆದು, ಸಂಘಟಿತರಾಗಿ, ಹೋರಾಟ ಮಾಡಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ಸುಬ್ಬರಾಜು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ಜಿಲ್ಲಾಧ್ಯಕ್ಷ ಸುಬ್ಬರಾಜು ನೇತೃತ್ವದಲ್ಲಿ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳನ್ನು ನೇಮಕ ಮಾಡಿ ಮಾತನಾಡಿದ ಅವರು, ಪಕ್ಷಾತೀತವಾಗಿ ಮಾದರ ಮಹಾಸಭಾ ಸ್ಥಾಪನೆ ಮಾಡಲಾಗಿದೆ. ಮಾದಿಗ ಸಮುದಾಯ ಏಳಿಗೆಗಾಗಿ ಮಾದರ ಮಹಾಸಭಾ ಸಾಕಷ್ಟು ಕೆಲಸ ಮಾಡುತ್ತಿದೆ ಎಂದರು.

ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರು ಹೆಚ್ಚೆಚ್ಚು ಸದಸ್ಯತ್ವ ನೋಂದಣಿ ಮಾಡಿಸಬೇಕು.‌ ರಾಜ್ಯದಲ್ಲಿ ಶೋಷಿತ ಸಮುದಾಯಗಳಲ್ಲಿ‌ ಮಾದಿಗ ಸಮುದಾಯವೂ ಒಂದು. ಉದ್ಯೋಗ, ಶೈಕ್ಷಣಿಕ, ಆರ್ಥಿಕ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ನಾವೆಲ್ಲರೂ ಸಂಘಟಿತರಾಗಬೇಕು. ಜನಾಂಗ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ.

ತಾಲ್ಲೂಕು ನೂತನ ಅಧ್ಯಕ್ಷ ತಳವಾರ ನಾಗರಾಜು ಮಾತನಾಡಿ, ನನಗೆ ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಸಂತಸ ತಂದಿದೆ. ಸದಸ್ಯತ್ವ ನೋಂದಣಿಗೆ ಶ್ರಮಿಸುತ್ತೇನೆ. ಮಾದರ ಮಹಾಸಭಾ ತತ್ವಾದರ್ಶಗಳಿಗೆ ಬದ್ಧನಾಗಿರುತ್ತೇನೆ ಎಂದರು.

ಮುಂದಿನ ದಿನಗಳಲ್ಲಿ ರಾಜಕೀಯ, ಉದ್ಯೋಗ ಹಾಗೂ ಎಲ್ಲಾ ರಂಗಗಳಲ್ಲಿ ಮೀಸಲಾತಿ ಸಿಗಬೇಕು. ಮಾದಿಗ ಸಮುದಾಯ ಶೋಷಿತರಲ್ಲಿ ಶೋಷಿತರು.‌ ಈಗಿರುವ ಒಳ ಮೀಸಲಾತಿ ಸಾಕಾಗಲ್ಲ, ಇನ್ನೂ ಹೆಚ್ಚಿಗೆ ಮಾಡಬೇಕು ಎಂದು ಒತ್ತಾಯಿಸಿದರು..

ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರ ಪಟ್ಟಿ

ಅಧ್ಯಕ್ಷ- ತಳವಾರ ನಾಗರಾಜು

ಉಪಾಧ್ಯಕ್ಷ- ಟಿ.ಡಿ ಮುನಿಯಪ್ಪ

ಕಾರ್ಯದರ್ಶಿ- ತೂಬಗೆರೆ ವೆಂಕಟೇಶ್

ಖಜಾಂಚಿ – ಲಕ್ಕಪ್ಪ

ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನೂತನವಾಗಿ ಆಯ್ಕೆಯಾದವರಿಗೆ ಹೂಮಾಲೆ, ಸಿಹಿ ತಿನಿಸುವ ಮೂಲಕ ಶುಭಕೋರಲಾಯಿತು..

ಈ ವೇಳೆ ಕರ್ನಾಟಕ ಮಾದಾರ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಬಚ್ಚಹಳ್ಳಿ ನಾಗರಾಜ್, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ, ತಾಲೂಕು ಉಪಾಧ್ಯಕ್ಷ ಟಿ.ಡಿ ಮುನಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

4 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

17 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

18 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

20 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

21 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

23 hours ago