ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಇಂದು ದಾವಣಗೆರೆಯ ಪರಿವೀಕ್ಷಣಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.
ಜಿಲ್ಲೆಯಲ್ಲಿ ಒಟ್ಟು 4 ಲಕ್ಷ ಪಡಿತರ ಕಾರ್ಡ್ ಗಳಿದ್ದು, ಸುಮಾರು 15 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಪಡಿತರ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 729 ನ್ಯಾಯಬೆಲೆ ಅಂಗಡಿಗಳನ್ನು ಹೊಂದಿದ್ದು, ಒಳ ಮೀಸಲಾತಿ ಅಡಿಯಲ್ಲಿ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.
ಅಕ್ರಮವಾಗಿ ಹೊಂದಿರುವ ಅನರ್ಹ ಪಡಿತರ ಕಾರ್ಡುಗಳನ್ನು ಪತ್ತೆ ಹಚ್ಚುವುದರೊಂದಿಗೆ
ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಪಡಿತರ ಕಾರ್ಡ್ ವಿತರಿಸಲು ಕ್ರಮ ವಹಿಸುತ್ತಿದ್ದು ತಾವು ಅರ್ಹರನ್ನು ಗುರುತಿಸಲು ಸೂಚನೆ ನೀಡಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ತೂಕ ಮತ್ತು ಅಳತೆಯ ಗುಣಮಟ್ಟವನ್ನು ಕಾಪಾಡುವ ಕಡೆ ಗಮನವಹಿಸಿ ಪೆಟ್ರೋಲ್ ಬಂಕ್ ಗಳಲ್ಲಿ ನಾಗರಿಕರಿಗೆ ಯಾವುದೇ ಮೋಸವಾಗದಾಗೆ ನಿಗಾವಹಿಸಬೇಕು. ಹಾಗೆಯೇ ಅಂಗಡಿಗಳಲ್ಲಿ ತೂಕದ ಮೆಷಿನ್ ಗಳನ್ನು ತಪಾಸಣೆ ಮಾಡಿ ಸತ್ಯಾಪಣ ಮತ್ತು ಮುದ್ರೆಯ ಮಾಡಿ ಪ್ರಮಾಣಪತ್ರ ವಿತರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಜಂಟಿ ಉಪ ನಿರ್ದೇಶಕರಾದ ಮಧು ಸೂದನ್ ಹಾಗೂ ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕ ವೆಂಕಟೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…