ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022-23″ರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
ಇನ್ನೂ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬರಲಿದ್ದೂ ಈ ಚುನಾವಣೆಗೆ ಕಾರ್ಯದಲ್ಲಿ ಸರ್ಕಾರಿ ನೌಕರರ ತೊಡಗಿಸಿಕೊಳ್ಳಲಿದ್ದಾರೆ. ಚುನಾವಣೆ ಮಾತ್ರವಲ್ಲದೇ ಸರ್ಕಾರದ ಯಾವುದೇ ಸರ್ವೆ, ಸಭೆ, ಸಮಾರಂಭಗಳಾದರೂ ಸಂಪೂರ್ಣ ಹೊಣೆ ಸರ್ಕಾರಿ ನೌಕರರಾದ ನಮ್ಮದೇ ಆಗಿರುತ್ತದೆ. ಇಂತಹ ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸಲು, ಉತ್ಸಾಹದಿಂದ ಕೆಲಸ ನಿರ್ವಹಿಸಲು ಕ್ರೀಡೆಗಳು ಸಹಕಾರಿ ಎಂದರು.
ಯಾವುದೇ ಕೆಲಸ ನಿರ್ವಹಿಸುವಾಗ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಅತ್ಯಂತ ಹೆಚ್ಚು ಪ್ರಾಮಾಣಿಕತೆ, ಬದ್ಧತೆ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾರೆ. ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುವಾಗ ಸಮಸ್ಯೆಗಳು ಎದುರಾಗುವುದು ಸಾಮಾನ್ಯವಾಗಿದ್ದು, ಅಧಿಕಾರಿಗಳು-ಸಿಬ್ಬಂದಿ ಎದೆಗುಂದದೆ ಧೈರ್ಯವಾಗಿ ಕಾರ್ಯ ನಿರ್ವಹಿಸಬೇಕು. ಏನೇ ಸಮಸ್ಯೆಗಳಿದ್ದರೂ ನನ್ನೊಂದಿಗೆ ಸಿಬ್ಬಂದಿಗಳು ಮುಕ್ತವಾಗಿ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದರು.
ಜಿಲ್ಲೆಯ ಸರ್ಕಾರಿ ನೌಕರರು ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯ ಕುರಿತು ತಮ್ಮ ಬಾಲ್ಯದ ನೆನಪುಗಳನ್ನು ತಿಳಿಸುತ್ತಾ, ನಾಲ್ಕು ತಾಲ್ಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ ಎಂದರಲ್ಲದೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿ, ಯಶಸ್ವಿಗೆ ಹಾರೈಸಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಅವರು ಸ್ವಾಗತಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳು, ನಾಲ್ಕು ತಾಲ್ಲೂಕುಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…