ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ಆರ್.ಲತಾ

ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ‌ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022-23″ರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ಸರ್ಕಾರಿ ನೌಕರರಿಗೆ ಇಂದಿನ ಪರಿಸ್ಥಿತಿಯಲ್ಲಿ ಕ್ರೀಡಾಕೂಟಗಳೂ ಅತ್ಯಗತ್ಯ. ಕಳೆದ ಎರಡು ವರ್ಷ ಕೊರೋನಾ ಸಂಕಷ್ಟಕಾಲದಲ್ಲಿ ಜನರನ್ನು ಮನೆಯಲ್ಲಿರಿಸಿ ಸರ್ಕಾರಿ ನೌಕರರು ಸಾರ್ವಜನಿಕರ ರಕ್ಷಣೆಗೆ ನಿಂತು ಸೇವೆ ಸಲ್ಲಿಸಿದ್ದಾರೆ.

ಇನ್ನೂ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬರಲಿದ್ದೂ ಈ ಚುನಾವಣೆಗೆ ಕಾರ್ಯದಲ್ಲಿ ಸರ್ಕಾರಿ ನೌಕರರ ತೊಡಗಿಸಿಕೊಳ್ಳಲಿದ್ದಾರೆ. ಚುನಾವಣೆ ಮಾತ್ರವಲ್ಲದೇ ಸರ್ಕಾರದ ಯಾವುದೇ ಸರ್ವೆ, ಸಭೆ, ಸಮಾರಂಭಗಳಾದರೂ ಸಂಪೂರ್ಣ ಹೊಣೆ ಸರ್ಕಾರಿ ನೌಕರರಾದ ನಮ್ಮದೇ ಆಗಿರುತ್ತದೆ. ಇಂತಹ ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸಲು, ಉತ್ಸಾಹದಿಂದ ಕೆಲಸ ನಿರ್ವಹಿಸಲು ಕ್ರೀಡೆಗಳು ಸಹಕಾರಿ ಎಂದರು.

ಯಾವುದೇ ಕೆಲಸ ನಿರ್ವಹಿಸುವಾಗ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಅತ್ಯಂತ ಹೆಚ್ಚು ಪ್ರಾಮಾಣಿಕತೆ, ಬದ್ಧತೆ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾರೆ. ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುವಾಗ ಸಮಸ್ಯೆಗಳು ಎದುರಾಗುವುದು ಸಾಮಾನ್ಯವಾಗಿದ್ದು, ಅಧಿಕಾರಿಗಳು-ಸಿಬ್ಬಂದಿ ಎದೆಗುಂದದೆ ಧೈರ್ಯವಾಗಿ ಕಾರ್ಯ ನಿರ್ವಹಿಸಬೇಕು. ಏನೇ ಸಮಸ್ಯೆಗಳಿದ್ದರೂ ನನ್ನೊಂದಿಗೆ ಸಿಬ್ಬಂದಿಗಳು ಮುಕ್ತವಾಗಿ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದರು.

ಜಿಲ್ಲೆಯ ಸರ್ಕಾರಿ ನೌಕರರು ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯ ಕುರಿತು ತಮ್ಮ ಬಾಲ್ಯದ ನೆನಪುಗಳನ್ನು ತಿಳಿಸುತ್ತಾ, ನಾಲ್ಕು ತಾಲ್ಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ ಎಂದರಲ್ಲದೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿ, ಯಶಸ್ವಿಗೆ ಹಾರೈಸಿದರು.

ಕ್ರೀಡಾಕೂಟದ ಅಂಗವಾಗಿ ಕಾರ್ಯಕ್ರಮದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾಜ್ಯೋತಿ ಸ್ವೀಕರಿಸಲಾಯಿತು ಹಾಗೂ ತ್ರಿ-ವರ್ಣ ಬಣ್ಣದ ಬಲೂನ್‌ಗಳನ್ನು ಆಕಾಶದೆಡೆಗೆ ಹಾರಿಬಿಡಲಾಯಿತು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಅವರು ಸ್ವಾಗತಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳು, ನಾಲ್ಕು ತಾಲ್ಲೂಕುಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

2 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

4 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

15 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

22 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago