ಮಾರ್ಚ್ 22 ರಂದು ಜಿಲ್ಲಾಧಿಕಾರಿಗಳಿಂದ ಸೋಮೇಶ್ವರ ದೇವಸ್ಥಾನದ ಕಲ್ಯಾಣಿ ಸ್ವಚ್ಛತಾ ಕಾರ್ಯ

ವಿಶ್ವ ಜಲ ದಿನದ ಅಂಗವಾಗಿ ಮಾರ್ಚ್ 22 ರಂದು ಬೆಳಿಗ್ಗೆ 06 ಗಂಟೆಗೆ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ದೇವಸ್ಥಾನದ ಕಲ್ಯಾಣಿಯನ್ನು ಸ್ವಚ್ಛಗೊಳಿಸಿ, ಪುನಶ್ಚೇತನ ಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕೋರಿದ್ದಾರೆ.

ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ವರ್ಷದ ಘೋಷ ವಾಕ್ಯ *ಹಿಮಪಾತ ಸಂರಕ್ಷಣೆ* ಇದು ಹಿರಿ ನದಿಗಳನ್ನು ಸಂರಕ್ಷಿಸುವುದನ್ನು ಒತ್ತಿ ಹೇಳುತ್ತದೆ ಮತ್ತು ಪ್ರಮುಖ ಸಿಹಿ ನೀರಿನ ಮೂಲಗಳನ್ನು ರಕ್ಷಿಸಲು ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಮತ್ತು ಭವಿಷ್ಯದ ಪೀಳಿಗೆಗೆ ನೀರಿನ ಸಂರಕ್ಷಣೆಯನ್ನು ಖಚಿತ ಪಡಿಸಿಕೊಳ್ಳಲು ಹವಾಮಾನ ಬದಲಾವಣೆಯ ವಿರುದ್ಧ ತಕ್ಷಣದ ಕ್ರಮವನ್ನು ತೆಗೆದುಕೊಳ್ಳುವ ಬಗ್ಗೆ ಪ್ರಾಮುಖ್ಯತೆಯನ್ನು ನೀಡುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಡಿ 98 ಕೆರೆಗಳು, ಜಿಲ್ಲಾ ಪಂಚಾಯಿತಿಯಡಿ 612 ಕೆರೆಗಳು ಸೇರಿ ಒಟ್ಟು 710 ಕೆರೆಗಳು ಇದೆ. 87 ಕಲ್ಯಾಣಿ, 146 ಕುಂಟೆ, 82 ಗೋಕಟ್ಟೆ, 36 ಕಟ್ಟೆಗಳು ಸೇರಿ ಒಟ್ಟು 356 ಸಂಪ್ರದಾಯಿಕ ನೀರು ಸಂಗ್ರಹಣ ಮೂಲಗಳಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ಕೆರೆಗಳು ಮತ್ತು ಸಂಪ್ರದಾಯಿಕ ನೀರು ಸಂಗ್ರಹಣ ವ್ಯವಸ್ಥೆಗಳು ಇರುವುದರಿಂದ ಸಾಮಾನ್ಯವಾಗಿ ತಂಪು ವಾತಾವರಣ ಇರಬೇಕಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ನೀರಿನ ಸಂಗ್ರಹಣ ವ್ಯವಸ್ಥೆಗಳು ವಿವಿಧ ಕಾರಣಗಳಿಂದಾಗಿ ಕ್ಷೀಣಿಸುತ್ತಿರುವುದರಿಂದ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ನಗರಾಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ಜಿಲ್ಲೆಯಲ್ಲಿರುವ ಕೆರೆ, ಕಲ್ಯಾಣಿ ಕುಂಟೆಗಳನ್ನು ಪುನಃಚೇತನ ಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಜನತೆ ಕಾರ್ಯಕ್ರಮದಲ್ಲಿ ಜೊತೆಯಾಗಿ ಕೆರೆ, ಕಲ್ಯಾಣಿ, ಕುಂಟೆಗಳನ್ನು ಸ್ವಚ್ಚಗೊಳಿಸಿ ಪುನಶ್ಚೇತನಗೊಳಿಸಲು ಸಹಕರಿಸಿ ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

14 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

18 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

18 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

23 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago