ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ವತಿಯಿಂದ ನಗರದ ಡಿ-ಕ್ರಾಸ್ ಮೇಲ್ಸೇತುವೆ ಸಮೀಪದ ಧೀರಜ್ ಮುನಿರಾಜು ನಿವಾಸದ ಬಳಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎ, ಬಿಕಾಂ,ಬಿಎಸ್ಸಿ, ಬಿಬಿಎ, ಎಂಬಿಎ, ಎಂಸಿಎ,ಐಟಿಐ, ಡಿಪ್ಲೋಮಾ, ಬಿಇ, ಯಾವುದೇ ಪದವಿ ಹಾಗೂ ಕಂಪ್ಯೂಟರ್ ಕೋರ್ಸ್ ವ್ಯಾಸಂಗ ಮಾಡಿರುವ ನಿರುದ್ಯೋಗಿ ಯುವಕ-ಯುವತಿಯರು ಮೇಳದಲ್ಲಿ ಭಾಗವಹಿಸಬಹುದು.
ತಾಲೂಕಿನ ನಿರುದ್ಯೋಗ ಯುವಜನರಿಗಾಗಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮುಖಂಡ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ಈ ಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದಾರೆ.
ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯುವ ಮೇಳದಲ್ಲಿ 100 ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಲಿವೆ. ಈಗಾಗಲೇ 8000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ಆಸಕ್ತ ಉದ್ಯೋಗಾಕಾಂಕ್ಷಿಗಳು 5 ಸೆಟ್ ಸ್ವವಿವರ (ರೆಸ್ಯೂಮ್)ದ ಪ್ರತಿಗಳೊಂದಿಗೆ ಆಧಾರ್ ಕಾರ್ಡ್, ಗುರುತಿನ ಚೀಟಿ ತರಲು ಸೂಚಿಸಲಾಗಿದೆ. ಉದ್ಯೋಗ ಮೇಳದಲ್ಲಿ ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಮಾಹಿತಿಗಾಗಿ ಮೊ: 8088543440/ 9916295222 ಸಂಪರ್ಕಿಸಲು ಕೋರಲಾಗಿದೆ.
ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಧೀರಜ್ ಮುನಿರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…