ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರಗಳ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ.
ಬ್ರಹ್ಮ ರಥೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ ನಡೆಯುವ ನಾಟಕೋತ್ಸವದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ದೇವಾಲಯದ ವತಿಯಿಂದ ₹6,500 ಪ್ರೋತ್ಸಾಹ ನೀಡಲಾಗುವುದು ಎಂದು ದೇವಾಲಯದ ಧರ್ಮದರ್ಶಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಮಾರ್ಚ್ 8 ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾರ್ಚ್ 10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ,ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.
ಮಾರ್ಚ್ 11 ರಂದು ರಾತ್ರಿ 8 ಗಂಟೆಗೆ ಬೆಳ್ಳಿ ಫಲ್ಲಕ್ಕಿ ಉತ್ಸವ ಮತ್ತು ಸಂಗೀತ ರಸಸಂಜೆ ನಡೆಯಲಿದೆ. ಮಾರ್ಚ್ 12 ರಂದು ರಾತ್ರಿ 9 ಗಂಟೆಗೆ ಚಂದ್ರ ಮಂಡಲೋತ್ಸವ, ಕೀಲುಕುದುರೆ ಕಾರ್ಯಕ್ರಮ ನಡೆಯಲಿವೆ. ಮಾರ್ಚ್ 14 ರಂದು ಸಂಜೆ 7 ಗಂಟೆಗೆ ಕಾಕವಾಹನೋತ್ಸವ ಮತ್ತು ಸಂಗೀತ ಸಂಜೆ ಕಾರ್ಯಕ್ರಮ, ಮಾರ್ಚ್ 15 ರಂದು ಬೆಳಿಗ್ಗೆ 9 ಗಂಟೆಗೆ ಸುಪ್ರಭಾತೋತ್ಸವ, ಡೊಳ್ಳು ಕುಣಿತ ನಡೆಯಲಿದೆ.
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…