ಕಾರ್ಖಾನೆಗಳಿಂದ ಕಲುಷಿತ ನೀರು ಕೆರೆಗಳಿಗೆ ನೇರವಾಗಿ ಹರಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತಿದ್ದನ್ನು ಕೂಡಲೇ ತಡೆಯಲು ಸಂಬಂಧಪಟ್ಟ ಕಾರ್ಖಾನೆಗಳು ಹಾಗೂ ಅಧಿಕಾರಿಗಳು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಎಂದು ಉಪ ಲೋಕಾಯುಕ್ತರಾದ ಬಿ. ವೀರಪ್ಪ ಎಚ್ಚರಿಕೆ ನೀಡಿದರು.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿ ವಿವಿಧ ಕೆರೆಗಳಿಗೆ ಅನಿರೀಕ್ಷಿತ ಧಿಡೀರ್ ಭೇಟಿ ನೀಡಿ ಪರಿಶೀಲಿಸಿದ ಉಪ ಲೋಕಾಯುಕ್ತರು ನಗರಸಭೆಯ ಕಲುಷಿತ ನೀರು, ಕಾರ್ಖಾನೆ ತ್ಯಾಜ್ಯ ಸೇರಿ ಕುಡಿಯಲು ಬಳಸಲು ಯೋಗ್ಯವಲ್ಲದಂತ ನೀರು ಸರಬರಾಜು ನಿಲ್ಲಿಸಿ, ಗ್ರಾಮಸ್ಥರಿಗೆ ಕುಡಿಯಲು ಯೋಗ್ಯ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಮಾಲಿನ್ಯ ನೀರು ಹರಿಯುತ್ತಿರುವ ವಿವಿಧ ಕೆರೆಗಳು ಹಾಗೂ ಕಾರ್ಖಾನೆಗಳ ರಾಸಯನಿಕ ತ್ಯಾಜ್ಯಗಳು ಕೆರೆ ಸೇರಿ ಜನರ ಆರೋಗ್ಯದ ಮೇಲೆ ನಾನಾ ಪರಿಣಾಮ ಬೀರುತ್ತಿದೆ. ಮುಂಬರುವ ದಿನಗಳಲ್ಲಿ ಇದು ಇನ್ನು ಉಲ್ಬಣಿಸುವ ಸಾಧ್ಯತೆ ಹೆಚ್ಚಿದ್ದು, ಸಮಸ್ಯೆ ಬಗೆಹರಿಯದಿದ್ದರೆ ಅಧಿಕಾರಿಗಳೇ ನೇರ ಹೊಣೆ ಎಂದರು.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ತಾತ್ಕಾಲಿಕ ಕಟ್ಟಡ ನೀಡಿದರೂ ಸ್ಥಳಾಂತರ ಮಾಡಿಲ್ಲ ಎಂದು ಗ್ರಾಮಸ್ಥರು ಉಪಲೋಕಾಯುಕ್ತರಿಗೆ ತಿಳಿಸಿದರು. ಈ ಬಗ್ಗೆ ಮಾತನಾಡಿದ ಅವರು, ಕಚೇರಿ ನೀಡಿದರು ಏಕೆ ಸ್ಥಳಾಂತರಿಸಿಲ್ಲ. ನೀವು ಮಾತ್ರ ಚೆನ್ನಾಗಿದ್ದರೆ ಸಾಕಾ, ಜನರಿಗೆ ಏನಾದರೂ ನಿಮಗೆ ಪರವಾಗಿಲ್ಲ ಅಲ್ವಾ? ಕೂಡಲೇ ಕಚೇರಿಯನ್ನು ಸ್ಥಳಾಂತರಿಸಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದರು.
*ಗ್ರಾಮಸ್ಥರ ಅಳಲು*
ಚಿಕ್ಕತುಮಕೂರು, ದೊಡ್ಡತುಮಕೂರು, ಮಜರಾಹೊಸಹಳ್ಳಿ ಭಾಗದ ಜನರು ವಿವಿಧ ಬಳಕೆಗಳಿಗೆ ಕೆರೆ ನೀರಿನ ಮೇಲೆ ಅವಲಂಬಿತರಾಗಿದ್ದು, ಪ್ರಾಣಿಗಳು ಸಹ ಅದೇ ನೀರು ಕುಡಿಯುವಂತಾಗಿದೆ. ಕಲುಷಿತಗೊಂಡ ಕೆರೆ ನೀರು ಬಳಸಿ ಇಲ್ಲಿನ ಗ್ರಾಮಸ್ಥರು ವಿವಿಧ ಖಾಯಿಲೆಗಳಿಗೆ ಗುರಿಯಾಗಿದ್ದಾರೆ. ಕುಡಿಯಲು ಸೇರಿದಂತೆ ದೈನಂದಿನ ಚಟುವಟಿಕೆಗಳಿಗೆ ಬಳಸಲು ಕೆರೆ ನೀರು ಯೋಗ್ಯವಿಲ್ಲದಂತಾಗಿದೆ. ಇದರ ವಿರುದ್ಧ ಪ್ರತಿಭಟನೆಗೆ ಮುಂದಾದವರ ಮೇಲೆ ಪ್ರಕರಣಗಳು ದಾಖಲಾಗಿವೆ. ಆದರೆ ಈ ಬಗ್ಗೆ ಹಲವು ಬಾರಿ ದೂರು ನೀಡಿದರು ಯಾವುದೇ ಕ್ರಮವಹಿಸಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಕೂಡ ಇಲ್ಲಿಗೆ ಸ್ಥಳಾಂತರ ಮಾಡಿಲ್ಲ ಎಂದು ಗ್ರಾಮಸ್ಥರು ಉಪಲೋಕಾಯುಕ್ತರಿಗೆ ತಮ್ಮ ಅಳಲು ತೋಡಿಕೊಂಡರು.
ಮಕ್ಕಳಿಂದ ವೃದ್ಧರವರೆಗೂ ಇದೇ ನೀರನ್ನು ಬಳಸುತ್ತಿರುವ ಕಾರಣದಿಂದ ಹಲವಾರು ಮಾರಣಾಂತಿಕ ಕಾಯಿಲೆಗೆ ಜನರು ತುತ್ತಾಗಿದ್ದಾರೆ. ಕ್ಯಾನ್ಸರ್, ಚರ್ಮರೋಗ, ಕಿಡ್ನಿ ವೈಫಲ್ಯ, ಕಣ್ಣಿನ ಸಮಸ್ಯೆ ಸೇರಿದಂತೆ ಗರ್ಭಕೋಶ ತೊಂದರೆಗಳು ಸಹ ಈಗಾಗಲೇ ಜನರಲ್ಲಿ ಕಂಡುಬಂದಿದೆ. ಇದೇ ರೀತಿ ಮುಂದುವರೆದರೆ ಇನ್ನೂ ಹಲವಾರು ಕಾಯಿಲೆಗಳಿಗೆ ತುತ್ತಾಗುವ ಭಯದಿಂದ ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಅನುರಾಧಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ಮಲ್ಲಪ್ಪ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಜಿಲ್ಲಾ ಕೈಗಾರಿಕಾ ಇಲಾಖೆ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಮುಖಂಡರು, ರೈತರು ಉಪಸ್ಥಿತರಿದ್ದರು.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…