ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗವನ್ನು ಇಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಉನ್ನತ‌ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಅಧ್ಯಕ್ಷರ ನಿಯೋಗವು ಅಕ್ಟೋಬರ್ 09 ರಂದು ರಾಜಭವನ ಕಚೇರಿಗೆ ಭೇಟಿ ನೀಡಿ ರಾಜ್ಯದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾಲ್ಡೀವ್ಸ್ ನ ವಾಣಿಜ್ಯ ವ್ಯವಹಾರ ಮತ್ತಿತರ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿ ನಂತರ ರಾಜಭವನದಲ್ಲಿ ರಾಜ್ಯಪಾಲರು ಆಯೋಜಿಸಲಾಗಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದರು.

ನಂತರ ಹೊಟೆಲ್ ತಾಜ್ ವೆಸ್ಟ್ ಎಂಡ್ ನಲ್ಲಿ ದೇಶದ ಮತ್ತು ರಾಜ್ಯದ ವಾಣಿಜ್ಯೋದ್ಯಮಿಗಳೊಂದಿಗೆ ಹಮ್ಮಿಕೊಳ್ಳಲಾದ ಸಭೆಗಳಲ್ಲಿ ಭಾಗವಹಿಸಿ ತಾಜ್‌ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಾಸ್ತವ್ಯ ಮಾಡಿ ಇಂದು ಅಕ್ಟೋಬರ್ 10 ರಂದು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲೆಗೆ ಪ್ರಯಾಣಿಸಿತು‌.

ಈ ಸಂದರ್ಭದಲ್ಲಿ ಇಂಡಿಯಾ ಮಾಲ್ಡೀವ್ಸ್ ಹೈ ಕಮಿಷನರ್ ಮುನು ಮಹವರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ., ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ಎನ್. ಶಿವಶಂಕರ್, ಪ್ರಾದೇಶಿಕ ಪಾಸ್ ಪೋರ್ಟ್ ಆಧಿಕಾರಿಗಳಾದ ಕೃಷ್ಣ. ಕೆ., ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *