ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗವನ್ನು ಇಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.
ಅಧ್ಯಕ್ಷರ ನಿಯೋಗವು ಅಕ್ಟೋಬರ್ 09 ರಂದು ರಾಜಭವನ ಕಚೇರಿಗೆ ಭೇಟಿ ನೀಡಿ ರಾಜ್ಯದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾಲ್ಡೀವ್ಸ್ ನ ವಾಣಿಜ್ಯ ವ್ಯವಹಾರ ಮತ್ತಿತರ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿ ನಂತರ ರಾಜಭವನದಲ್ಲಿ ರಾಜ್ಯಪಾಲರು ಆಯೋಜಿಸಲಾಗಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದರು.
ನಂತರ ಹೊಟೆಲ್ ತಾಜ್ ವೆಸ್ಟ್ ಎಂಡ್ ನಲ್ಲಿ ದೇಶದ ಮತ್ತು ರಾಜ್ಯದ ವಾಣಿಜ್ಯೋದ್ಯಮಿಗಳೊಂದಿಗೆ ಹಮ್ಮಿಕೊಳ್ಳಲಾದ ಸಭೆಗಳಲ್ಲಿ ಭಾಗವಹಿಸಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಾಸ್ತವ್ಯ ಮಾಡಿ ಇಂದು ಅಕ್ಟೋಬರ್ 10 ರಂದು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲೆಗೆ ಪ್ರಯಾಣಿಸಿತು.
ಈ ಸಂದರ್ಭದಲ್ಲಿ ಇಂಡಿಯಾ ಮಾಲ್ಡೀವ್ಸ್ ಹೈ ಕಮಿಷನರ್ ಮುನು ಮಹವರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ., ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ಎನ್. ಶಿವಶಂಕರ್, ಪ್ರಾದೇಶಿಕ ಪಾಸ್ ಪೋರ್ಟ್ ಆಧಿಕಾರಿಗಳಾದ ಕೃಷ್ಣ. ಕೆ., ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…