ಕೋಲಾರ: ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ ಮಾವಿನ ಪ್ರತಿ ಕೆಜಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಣೆಗೆ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಉಚಿತವಾಗಿ ಮಾವಿನ ಹಣ್ಣುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ನಮ್ಮನ್ನು ಆಳುವ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಮಾವು ಬೆಳೆಗಾರರು ಇವತ್ತು ಬೀದಿಗೆ ಬಂದಿದ್ದಾರೆ ಮಾವು ಬೆಳೆ ಕುಸಿತಕ್ಕೆ ಸಾಂದ್ರಿಕೃತ ಹಣ್ಣುಗಳ ರಸದ ಅಮದು ನೇರವಾದ ಕಾರಣವಾಗಿದೆ ಆಂಧ್ರಪ್ರದೇಶ ಮತ್ತು ತಮಿಳುನಾಡು ಜ್ಯೂಸ್ ಪ್ಯಾಕ್ಟರಿಗಳ ಮೇಲೆ ಅವಲಂಬನೆ ಆಗುವುದು ಬಿಟ್ಟು ನಮ್ಮದೇ ರಾಜ್ಯದಲ್ಲಿ ಜ್ಯೂಸ್ ಪ್ಯಾಕ್ಟರಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದು ಟನ್ ಮಾವುಗೆ 15 ಸಾವಿರ ರೂಗಳ ಸಿಗುವಂತೆ ಬೆಂಬಲ ಬೆಳೆ ಘೋಷಣೆ ಮಾಡಿ ಸಹಕಾರಿ ರಂಗದ ಮೂಲಕ ಹಣ್ಣು ತಿರುಳು ಕೈಗಾರಿಕೆಯನ್ನು ಸ್ಥಾಪಿಸಬೇಕು ಶ್ರೀನಿವಾಸಪುರದಲ್ಲಿನ ಪ್ರಮುಖ ಮಾರುಕಟ್ಟೆ ಕೇಂದ್ರವು ಪ್ರಪಂಚದ ಪ್ರಸಿದ್ದ ಮಾವಿನ ನಗರವಾಗಿ ಹೆಸರು ಪಡೆದಿದೆ ಹವಾಮಾನ ವೈಪರೀತ್ಯಾಗಳಿಂದ ಸಾಕಷ್ಟು ಬೆಳೆ ನಷ್ಟ ಆಗಿದ್ದ ಜೊತೆಗೆ ರೈತರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಮಾವಿನ ಕಾಯಿಗಳನ್ನು ತೋಟದಲ್ಲೇ ಬಿಡುವಂತೆ ಪರಿಸ್ಥಿತಿ ಬಂದು ಕಾಯಿಗಳನ್ನು ತೋಟದಲ್ಲಿ ಹಾಳೆಯುತ್ತಿವೆ ಕೂಡಲೇ ಸರ್ಕಾರಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ನಮ್ಮ ದೇಶದ ರೈತರ ರಕ್ಷಣೆ ನಿಲ್ಲಲು ನಮ್ಮ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಆಮುದಾಗುತ್ತಿರುವ ಹಣ್ಣಿನ ರಸ ಸಾಂದ್ರೀಕರಣ ನಿಲ್ಲಿಸಬೇಕು ಮತ್ತು ಮಾರುಕಟ್ಟೆಗೆ ಅವಕಾಶ ನೀಡದೇ ಹೆಚ್ಚಿನ ಸುಂಕ ವಿಧಿಸಬೇಕು. ಹಾಗೂ ಡಾ ಸ್ವಾಮಿನಾಥನ್ ಶಿಫಾರಸ್ಸಿನ ಮೇಲೆ ಮಾವಿಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು ಇಲ್ಲದೇ ಹೋದರೆ ಮುಂದೆ ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ ಪಕ್ಷದಿಂದ ರಾಜ್ಯಾದ್ಯಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ ಮಾವಿನ ಹಣ್ಣುಗಳಿಗೆ ಬೆಂಬಲ ಬೆಲೆ ಘೋಷಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು ಜಿಲ್ಲೆಯಲ್ಲಿ ಕೃಷಿ ಆಧಾರಿತ ಹಾಗೂ ಹಣ್ಣುಗಳ ರಸ ತೆಗೆಯುವ ಕಾರ್ಖಾನೆಗಳು ಸ್ಥಾಪನೆ ಆಗಬೇಕು, ವಿದೇಶಗಳಿಂದ ನಮ್ಮ ದೇಶಕ್ಕೆ ಆಮದಾಗುವ ಸಾಂದ್ರಿಕೃತ ಹಣ್ಣುಗಳ ರಸಗಳನ್ನು ನಿಲ್ಲಿಸಬೇಕು ರೈತರ ಧ್ವನಿಯಾಗದ ಶಾಸಕರು ಸಂಸದರ ವಿರುದ್ದ ಪ್ರತಿಭಟನೆಗೆ ಮುಂದಾಗಬೇಕೆಂದು ಎಚ್ಚರಿಕೆ ನೀಡಿದರು
ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ. ವೆಂಕಟೇಶ್, ಪಾತಕೋಟೆ ನವೀನ್ ಕುಮಾರ್, ತಂಗರಾಜ್ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಅಪ್ಪಯ್ಯಣ್ಣ, ಜಯಲಕ್ಷ್ಮಿ ಪಿ.ಶ್ರೀನಿವಾಸ್ ಮತ್ತು ಸಿಪಿಎಂ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…