Categories: ಕೋಲಾರ

ಮಾವಿಗೆ ಬೆಂಬಲ ಬೆಲೆ ಘೋಷಿಸುವಂತೆ ಸಿಪಿಐಎಂ ಪಕ್ಷದಿಂದ ರಸ್ತೆ ತಡೆ

ಕೋಲಾರ: ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ ಮಾವಿನ ಪ್ರತಿ ಕೆಜಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಣೆಗೆ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಉಚಿತವಾಗಿ ಮಾವಿನ ಹಣ್ಣುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ನಮ್ಮನ್ನು ಆಳುವ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಮಾವು ಬೆಳೆಗಾರರು ಇವತ್ತು ಬೀದಿಗೆ ಬಂದಿದ್ದಾರೆ ಮಾವು ಬೆಳೆ ಕುಸಿತಕ್ಕೆ ಸಾಂದ್ರಿಕೃತ ಹಣ್ಣುಗಳ ರಸದ ಅಮದು ನೇರವಾದ ಕಾರಣವಾಗಿದೆ ಆಂಧ್ರಪ್ರದೇಶ ಮತ್ತು ತಮಿಳುನಾಡು ಜ್ಯೂಸ್ ಪ್ಯಾಕ್ಟರಿಗಳ ಮೇಲೆ ಅವಲಂಬನೆ ಆಗುವುದು ಬಿಟ್ಟು ನಮ್ಮದೇ ರಾಜ್ಯದಲ್ಲಿ ಜ್ಯೂಸ್ ಪ್ಯಾಕ್ಟರಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದು ಟನ್ ಮಾವುಗೆ 15 ಸಾವಿರ ರೂಗಳ ಸಿಗುವಂತೆ ಬೆಂಬಲ ಬೆಳೆ ಘೋಷಣೆ ಮಾಡಿ ಸಹಕಾರಿ ರಂಗದ ಮೂಲಕ ಹಣ್ಣು ತಿರುಳು ಕೈಗಾರಿಕೆಯನ್ನು ಸ್ಥಾಪಿಸಬೇಕು ಶ್ರೀನಿವಾಸಪುರದಲ್ಲಿನ ಪ್ರಮುಖ ಮಾರುಕಟ್ಟೆ ಕೇಂದ್ರವು ಪ್ರಪಂಚದ ಪ್ರಸಿದ್ದ ಮಾವಿನ ನಗರವಾಗಿ ಹೆಸರು ಪಡೆದಿದೆ ಹವಾಮಾನ ವೈಪರೀತ್ಯಾಗಳಿಂದ ಸಾಕಷ್ಟು ಬೆಳೆ ನಷ್ಟ ಆಗಿದ್ದ ಜೊತೆಗೆ ರೈತರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಮಾವಿನ ಕಾಯಿಗಳನ್ನು ತೋಟದಲ್ಲೇ ಬಿಡುವಂತೆ ಪರಿಸ್ಥಿತಿ ಬಂದು ಕಾಯಿಗಳನ್ನು ತೋಟದಲ್ಲಿ ಹಾಳೆಯುತ್ತಿವೆ ಕೂಡಲೇ ಸರ್ಕಾರಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ನಮ್ಮ ದೇಶದ ರೈತರ ರಕ್ಷಣೆ ನಿಲ್ಲಲು ನಮ್ಮ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಆಮುದಾಗುತ್ತಿರುವ ಹಣ್ಣಿನ ರಸ ಸಾಂದ್ರೀಕರಣ ನಿಲ್ಲಿಸಬೇಕು ಮತ್ತು ಮಾರುಕಟ್ಟೆಗೆ ಅವಕಾಶ ನೀಡದೇ ಹೆಚ್ಚಿನ ಸುಂಕ ವಿಧಿಸಬೇಕು. ಹಾಗೂ ಡಾ ಸ್ವಾಮಿನಾಥನ್ ಶಿಫಾರಸ್ಸಿನ ಮೇಲೆ ಮಾವಿಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು ಇಲ್ಲದೇ ಹೋದರೆ ಮುಂದೆ ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ ಪಕ್ಷದಿಂದ ರಾಜ್ಯಾದ್ಯಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ ಮಾವಿನ ಹಣ್ಣುಗಳಿಗೆ ಬೆಂಬಲ ಬೆಲೆ ಘೋಷಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು ಜಿಲ್ಲೆಯಲ್ಲಿ ಕೃಷಿ ಆಧಾರಿತ ಹಾಗೂ ಹಣ್ಣುಗಳ ರಸ ತೆಗೆಯುವ ಕಾರ್ಖಾನೆಗಳು ಸ್ಥಾಪನೆ ಆಗಬೇಕು, ವಿದೇಶಗಳಿಂದ ನಮ್ಮ ದೇಶಕ್ಕೆ ಆಮದಾಗುವ ಸಾಂದ್ರಿಕೃತ ಹಣ್ಣುಗಳ ರಸಗಳನ್ನು ನಿಲ್ಲಿಸಬೇಕು ರೈತರ ಧ್ವನಿಯಾಗದ ಶಾಸಕರು ಸಂಸದರ ವಿರುದ್ದ ಪ್ರತಿಭಟನೆಗೆ ಮುಂದಾಗಬೇಕೆಂದು ಎಚ್ಚರಿಕೆ ನೀಡಿದರು

ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ. ವೆಂಕಟೇಶ್, ಪಾತಕೋಟೆ ನವೀನ್ ಕುಮಾರ್, ತಂಗರಾಜ್ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಅಪ್ಪಯ್ಯಣ್ಣ, ಜಯಲಕ್ಷ್ಮಿ ಪಿ.ಶ್ರೀನಿವಾಸ್ ಮತ್ತು ಸಿಪಿಎಂ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

2 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

14 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

18 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

21 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

23 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago