ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ (MIS-PDPS) ಮಾವು ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ ರೂ,1616 ದರ ನಿಗದಪಡಿಸಿದ್ದು ಅದರಂತೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವತಿಯಿಂದ ಮಾವು ಖರೀದಿ ಮಾಡಲಾಗುತ್ತಿದೆ.
*ನೋಂದಣಿ ಕೇಂದ್ರ/ ಖರೀದಿ ಕೇಂದ್ರದ ಸ್ಥಳ*
ಹೊಸಕೋಟೆ-ಬೆಂಗಳೂರು ಹೈವೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ವೈಟ್ ಫೀಲ್ಡ್ ನ ಖಾಜಿ ಸೊಣ್ಣೇನಹಳ್ಳಿ ಬಳಿಯ ಸಫಲ್ ಮಾರುಕಟ್ಟೆ(ಯುನಿಟ್ ಆಫ್ ಮದರ್ ಡೈರಿ ಫ್ರೂಟ್ ಅಂಡ್ ವೆಜಿಟೇಬಲ್ಸ್ )ಯಲ್ಲಿ ಮಾವು ನೋಂದಣಿ, ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು ಮಾವು ಬೆಳೆಗಾರರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿಗೆ ಭೇಟಿ ನೀಡಿ ಮಾವು ಮಾರಾಟ ಮಾಡಬಹುದಾಗಿದೆ.
ಜೂನ್ 27 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ ಅಥವಾ ಆರ್.ಟಿ.ಸಿ ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ಆಧಾರ್ ಜೋಡಣೆ ಕಡ್ಡಾಯ), ಭಾವಚಿತ್ರ ಹಾಗೂ FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ (FID)ಯನ್ನು ಕಡ್ಡಾಯವಾಗಿ ನೀಡಬೇಕು. FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಪಡೆಯಬಹುದು.
ಮಾವು ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮಾವು ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಎಕರೆಗೆ 20 ಕ್ವಿಂಟಾಲ್ ನಂತೆ ಗರಿಷ್ಠ 5 ಎಕರೆಗೆ 100 ಕ್ವಿಂಟಾಲ್ ವರೆಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡತಕ್ಕದ್ದು, ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ DBT ಮೂಲಕ ಹಣ ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು 94489 99214, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98802 10892, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94804 61234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94821 29648, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98804 61607, ಹೊಸಕೋಟೆ ಎ.ಪಿ.ಎಂ.ಸಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳು 82173 81079 ಗೆ ಸಂಪರ್ಕಿಸಹುದು ಎಂದು ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…