Categories: ರಾಜ್ಯ

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದ ಅಜ್ಜಿ- ‘ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ’- ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ 2ಸಾವಿರ‌ ರೂ. ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

51 minutes ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

3 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

4 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

12 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

15 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

23 hours ago