ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ 2ಸಾವಿರ ರೂ. ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…